ಆತ್ಮಹತ್ಯೆ 
ರಾಜ್ಯ

ಉದ್ಯೋಗ ಕಳೆದುಕೊಳ್ಳುವ ಭೀತಿ; ಪತ್ನಿ, ಮಗಳಿಗೆ ವಿಷ ನೀಡಿ ಪತಿ ಆತ್ಮಹತ್ಯೆ

ಪತ್ನಿ, ಮಗಳಿಗೆ ವಿಷ ನೀಡಿ ಬಳಿಕ‌ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆಯೊಂದು ನಗರದ ಕವಳಿಕಾಯಿ‌ ಚಾಳದಲ್ಲಿ ಶನಿವಾರ ನಡೆದಿದೆ.

ಧಾರವಾಡ: ಪತ್ನಿ, ಮಗಳಿಗೆ ವಿಷ ನೀಡಿ ಬಳಿಕ‌ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆಯೊಂದು ನಗರದ ಕವಳಿಕಾಯಿ‌ ಚಾಳದಲ್ಲಿ ಶನಿವಾರ ನಡೆದಿದೆ.

ಮೃತರನ್ನು ಪತಿ ಮೌನೇಶ್ ಪತ್ತಾರ (36 ವರ್ಷ), ಪತ್ನಿ ಅರ್ಪಿತಾ (28 ವರ್ಷ), ಮಗಳು ಸುಕೃತಾ (4 ವರ್ಷ) ಎಂದು ಗುರುತಿಸಲಾಗಿದೆ. ಪತ್ನಿ ಅರ್ಪಿತಾ , ಮಗಳು ಸುಕೃತಾಗೆ ವಿಷ ನೀಡಿ ಬಳಿಕ ಮೌನೇಶ್, ತಾವೂ ಕೂಡ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಮೂಲತಃ ಗದಗ ಜಿಲ್ಲೆ ರೋಣ ತಾಲೂಕಿನ ಅಸೂಟಿ ಗ್ರಾಮದವನಾದ ಮೌನೇಶ್ ಪತ್ತಾರ್ ನಗರದ ಟಾಟಾ ಮಾರ್ಕೊಪೋಲೋ ಕಂಪನಿಯಲ್ಲಿ ನೌಕರಿ ಮಾಡುತ್ತಿದ್ದ. ಈ ನಡುವೆ ಕಾರ್ಖಾನೆಯಲ್ಲಿ ಇತ್ತೀಚೆಗೆ ಸೋಂಕಿತರ ಸಂಖ್ಯೆ ಹೆಚ್ಚಳವಾಗಿತ್ತು. ಹೀಗಾಗಿ, ಮೌನೇಶ್​ಗೆ ಉದ್ಯೋಗ ಕಳೆದುಕೊಳ್ಳೋ ಆತಂಕ ಶುರುವಾಗಿತ್ತು. ಇದೇ ಯೋಚನೆಯಲ್ಲಿ ಪತ್ನಿ ಹಾಗೂ ಮಗಳಿಗೆ ವಿಷ ನೀಡಿದ್ದ ಮೌನೇಶ್​ ಬಳಿಕ ತಾನೇ ನೇಣಿಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!