ಸಂಗ್ರಹ ಚಿತ್ರ 
ರಾಜ್ಯ

ಸೇವೆ ಸಂದರ್ಭ ಹಲ್ಲೆ ಖಂಡಿಸಿ ಧರಣಿ: ಅಧಿಕಾರಿಗಳ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆದ ವೈದ್ಯರು

ಕೋವಿಡ್ ಚಿಕಿತ್ಸಾ ಕಾರ್ಯದಲ್ಲಿ ತೊಡಗಿರುವ ವೈದ್ಯರ ಮೇಲೆ ಹಲ್ಲೆ ಹಾಗೂ ಅಧಿಕಾರಿಗಳ ಅನುಚಿತ ವರ್ತನೆ ಖಂಡಿಸಿ ಧರಣಿಗಿಳಿದಿದ್ದ ವೈದ್ಯರು, ಅಧಿಕಾರಿಗಳ ಭರವಸೆ ಬಳಿಕ ಇದೀಗ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ. 

ಬೆಂಗಳೂರು: ಕೋವಿಡ್ ಚಿಕಿತ್ಸಾ ಕಾರ್ಯದಲ್ಲಿ ತೊಡಗಿರುವ ವೈದ್ಯರ ಮೇಲೆ ಹಲ್ಲೆ ಹಾಗೂ ಅಧಿಕಾರಿಗಳ ಅನುಚಿತ ವರ್ತನೆ ಖಂಡಿಸಿ ಧರಣಿಗಿಳಿದಿದ್ದ ವೈದ್ಯರು, ಅಧಿಕಾರಿಗಳ ಭರವಸೆ ಬಳಿಕ ಇದೀಗ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ. 

ಆರೋಗ್ಯ ಸಿಬ್ಬಂದಿಗಳ ಮೇಲಿನ ಹಲ್ಲೆ ಖಂಡಿಸಿ ನಗರದ ಕೆ.ಸಿ.ಜನರಲ್ ಆಸ್ಪತ್ರೆ ಸೇರಿದಂತೆ ವಿವಿಧೆಡೆ ವೈದ್ಯರು ಶುಕ್ರವಾರ ಕರ್ತವ್ಯದ ವೇಳೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆಗಿಳಿದಿದ್ದರು. 

ಇತ್ತೀಚೆಗೆ ಬೆಂಗಳೂರಿನ ಕೆಸಿ.ಜನರಲ್ ಆಸ್ಪತ್ರೆ, ಬೆಳಗಾವಿ ಜಿಲ್ಲಾಸ್ಪತ್ರೆ ಸೇರಿದಂತೆ ವಿವಿಧೆಡೆ ವೈದ್ಯರ ಮೇಲೆ ರೋಗಿಗಳ ಸಂಬಂಧಿಕರು ಹಲ್ಲೆ ನಡೆಸಿದ ಘಟನೆ ನಡೆದಿತ್ತು. 

ಪ್ರತಿಭಟನೆ ವೇಳೆ ಮಾತನಾಡಿದ ವೈದ್ಯರು, ರೋಗಿಯ ಪ್ರಾಣ ಕಾಪಾಡಲು ವೈದ್ಯ ಶ್ರಮಿಸುತ್ತಾನೆ ಹೊರತು ಪ್ರಾಣ ತೆಗೆಯುವ ಕೆಲಸ ಮಾಡುವುದಿಲ್ಲ. ಸರ್ಕಾರ ಇಂತಹ ಪ್ರಕರಣಗಳು ಮರುಕಳಿಸದಂತೆ ವೈದ್ಯರಿಗೆ ರಕ್ಷಣೆ ನೀಡಬೇಕು ಎಂದು ವೈದ್ಯರು ಎಚ್ಚರಿಸಿದ್ದರು. 

ಬೀದರ್ ನಲ್ಲಿ ಜಿಲ್ಲಾಧಿಕಾರಿಯೇ ವೈದ್ಯಾಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಸರ್ಕಾರ ಇಂತಹ ಘಟನೆಗಳು ನಡೆಯದಂತೆ ಜಿಲ್ಲಾಧಿಕಾರಿಗೆ ಆದೇಶ ಮಾಡಿದೆ. ಆದರೆ, ಇದು ಸಾಲದು, ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಬೇಕೆಂದು ವೈದ್ಯರು ಆಗ್ರಹಿಸಿದ್ದರು. 

ವೈದ್ಯರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಭದ್ರತೆ ನೀಡುವುದಾಗಿ ಭರವಸೆ ನೀಡಿದ್ದು, ಈ ಹಿನ್ನೆಲೆಯಲ್ಲಿ 10 ದಿನಗಳ ಕಾಲ ಪ್ರತಿಭಟನೆಯನ್ನು ಹಿಂಪಡೆಯುವ ನಿರ್ಧಾರ ಕೈಗೊಂಡಿದ್ದಾರೆ. 

ಕರ್ನಾಟಕ ಸ್ಥಳೀಯ ವೈದ್ಯ ಸಂಘಟನೆಯ ಅಧ್ಯಕ್ಷ ಡಾ.ದಯಾನಂದ್ ಸಾಗರ್ ಅವರು ಮಾತನಾಡಿ, ನಮ್ಮ ಆಗ್ರಹಗಳನ್ನು ಈಡೇರಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ. ರಾತ್ರಿ ಪಾಳಿ ಭತ್ಯೆ, ಉತ್ತಮ ಗುಣಮಟ್ಟದ ಪಿಪಿಇ ಕಿಟ್ ಗಳು, ಬಾಕಿ ಉಳಿದಿರುವ ವೇತನ ಸೇರಿದಂತೆ ಎಲ್ಲಾ ಆಗ್ರಹಗಳನ್ನು ಈಡೇರಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್