ರಾಜ್ಯ

ಇನ್ನುಮುಂದೆ ಬೆಂಗಳೂರಿನಲ್ಲಿ ಕೊರೋನಾ ವೈರಸ್ ನಿಂದ ಮೃತಪಟ್ಟವರ ಅಂತ್ಯಕ್ರಿಯೆ ಉಚಿತ

Lingaraj Badiger

ಬೆಂಗಳೂರು: ಬೆಂಗಳೂರಿನಲ್ಲಿ ಕೊರೋನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ವೆಚ್ಚವನ್ನು ರಾಜ್ಯ ಸರ್ಕಾರ ಮನ್ನಾ ಮಾಡಿದ್ದು, ಈ ಅಂತ್ಯಕ್ರಿಯೆಯ ವೆಚ್ಚವನ್ನು ಬಿಬಿಎಂಪಿ ಭರಿಸಲಿದೆ.

ಇನ್ನು ಮುಂದೆ ಕೊರೋನಾದಿಂದ ಮೃತಪಟ್ಟವರ ಕುಟುಂಬದವರು ಅಂತ್ಯಕ್ರಿಯೆಗಾಗಿ ಯಾವುದೇ ಹಣ ಪಾವತಿಸಬೇಕಾಗಿಲ್ಲ. ಉಚಿತ ಅಂತ್ಯಕ್ರಿಯೆ ಮಾಡುವಂತೆ ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್ ಆದೇಶ ಹೊರಡಿಸಿದ್ದಾರೆ.

ಈ ಮುಂಚೆ ಒಂದು ಶವಸಂಸ್ಕಾರಕ್ಕೆ 1250 ರೂ. ವಿಧಿಸಲಾಗುತ್ತಿತ್ತು. ಇದನ್ನು ರಾಜ್ಯ ಸರ್ಕಾರ ಸಂಪೂರ್ಣ ಮನ್ನಾ ಮಾಡಿದ್ದು, ಈ ವೆಚ್ಚವನ್ನು ಬಿಬಿಎಂಪಿ ಭರಿಸಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಅವರು ತಿಳಿಸಿದ್ದಾರೆ.

ಕೊರೋನಾ ವೈರಸ್ ನಿಂದ ಮೃತಪಟ್ಟವರ ಅಂತ್ಯಕ್ರಿಯೆ ವೇಳೆ ವಿಧಿ ವಿಧಾನಗಳನ್ನು ನಡೆಸುವ ಸಿಬ್ಬಂದಿಗೆ ಪ್ರೋತ್ಸಾಹ ಧನವಾಗಿ 500 ರೂಪಾಯಿ ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಕೊರೋನಾ ಸೋಂಕಿತರ ಅಂತ್ಯಕ್ರಿಯೆಗೆ ಸಾವಿರಾರು ರೂಪಾಯಿ ವಸೂಲಿ ಮಾಡಲಾಗುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

SCROLL FOR NEXT