ರಾಜ್ಯ

ಪ್ರವಾಸಿಗರ ಮೇಲಿನ ನಿರ್ಬಂಧ ಹಿಂಪಡೆದ ಮೈಸೂರು ಜಿಲ್ಲಾಧಿಕಾರಿ

Lingaraj Badiger

ಮೈಸೂರು: ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತೆ ವಹಿಸುವ ಸಂಬಂಧ ಎಚ್ ಡಿ ಕೋಟೆ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹೋಟೆಲ್, ಹೋಮ್ ಸ್ಟೇ, ರೆಸಾರ್ಟ್ ಲಾಡ್ಜ್, ವಸತಿ ಗೃಹಗಳಿಗೆ ಪ್ರವಾಸ ಮಾಡುವುದು ಹಾಗೂ ಪ್ರವಾಸಿಗರು ಆಗಮಿಸದಂತೆ ನಿರ್ಬಂಧಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಅವರು ಹೇಳಿದ್ದಾರೆ.

ಸರ್ಕಾರದ ಆದೇಶದಲ್ಲಿ ರಾಜ್ಯದ ಕಂಟೈನ್ ಮೆಂಟ್ ವಲಯಗಳ ಹೊರಗಿನ ಪ್ರದೇಶಗಳಲ್ಲಿ ಚಟುವಟಿಕೆಗಳ ಪುನರ್ ಆರಂಭಕ್ಕೆ ಮತ್ತು ಕಂಟೈನ್ ಮೆಂಟ್ ವಲಯಗಳಲ್ಲಿ ಲಾಕ್ ಡೌನ್ ವಿಸ್ತರಿಸಲು ಅನುಮತಿ ನೀಡಲಾಗಿದೆ. ಹೀಗಾಗಿ ಕಂಟೈನ್ ಮೆಂಟ್ ವಲಯ ಹೊರತುಪಡಿಸಿ ಇತರೆ ಪ್ರದೇಶಗಳಲ್ಲಿ ಪ್ರವಾಸಿಗರ ಮೇಲಿನ ನಿರ್ಬಂಧ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕ ಸಾಂಕ್ರಾಮಿಕ ರೋಗಗಳು ಕೊವಿಡ್-19 ರೆಗ್ಯೂಲೇಷನ್ಸ್ -2020 ನಿಯಮ 12 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 12, 30(2) ಮತ್ತು 34 ಅಡಿಯಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರವಾಸಿಗರು ಆಗಮಿಸದಂತೆ ವಿಧಿಸಿದ್ದ ನಿರ್ಬಂಧವನ್ನು ಜುಲೈ 24ರಂದು ಹಿಂಪಡೆಯಲಾಗಿದ್ದು, ಈ ಆದೇಶವು ಜುಲೈ 25 ರಿಂದ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SCROLL FOR NEXT