ಬೆಂಗಳೂರು: ತರಬೇತಿನಿರತ 90 ಪೊಲೀಸರಗೆ ಕೊರೋನಾ ಪಾಸಿಟಿವ್
ಬೆಂಗಳೂರಿನಲ್ಲಿ ತರಬೇತಿ ಪಡೆಯುತ್ತಿದ್ದ ಬರೋಬ್ಬರಿ 90 ಪೊಲೀಸರಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ತರಬೇತಿ ಪಡೆಯುತ್ತಿದ್ದ ಬರೋಬ್ಬರಿ 90 ಪೊಲೀಸರಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಥಣಿಸಂದ್ರದಲ್ಲಿರುವ ಪೊಲೀಸ್ ತರಬೇತಿ ಶಾಲೆಯಲ್ಲಿ 90 ಮಂದಿ ಪೊಲೀಸರಲ್ಲಿ ಕಳೆದ ವಾರ ವೈರಸ್ ಪತ್ತೆಯಾಗಿದೆ.
90 ಮಂದಿ ಪೊಲೀಸರಲ್ಲಿ ವೈರಸ್ ಪತ್ತೆಯಾಗಿರುವುದನ್ನು ಕಂಡು ಶಾಕ್ ಆಯಿತು. ಕೆಲವರನ್ನು ಕ್ಯಾಂಪಸ್ ನಲ್ಲಿಯೇ ಕ್ವಾರಂಟೈನ್ ಮಾಡಲಾಗಿದೆ. ಕೆಲವರನ್ನು ಕೋವಿಡ್ ಕೇರ್ ಕೇಂದ್ರದಲ್ಲಿ ದಾಖಲು ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ತರಬೇತಿ ಪಡಿಯುತ್ತಿದ್ದ 400 ಮಂದಿ ಪೊಲೀಸರು ಈಗಾಗಲೇ ಪೊಲೀಸ್ ಪೇದೆಯಾಗಿ ಆಯ್ಕೆಯಾಗಿದ್ದಾರೆ. ಇದೀಗ ಪೊಲೀಸರಲ್ಲಿ ಹೆಚ್ಚಾಗಿ ವೈರಸ್ ಕಂಡು ಬಂದ ಹಿನ್ನೆಲೆಯಲ್ಲಿ ತರಬೇತಿ ಶಾಲೆಯಲ್ಲಿ ಎಲ್ಲಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.