ವಿಧಾನಸೌಧ 
ರಾಜ್ಯ

ವಿಧಾನಮಂಡಲ, ವಿಧಾನಸಭೆಯ ಎಲ್ಲಾ ಸಮಿತಿಗಳ ಸಭೆ ನಡೆಸಲು ಸ್ಪೀಕರ್ ಸಮ್ಮತಿ

ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷ ಎಚ್‌.ಕೆ.ಪಾಟೀಲ್ ಅವರು ಸ್ಪೀಕರ್ ಅವರಿಗೆ ಪತ್ರ ಬರೆದು ಸಮಿತಿಯ ಸಭೆ ನಡೆಸಲು ಅವಕಾಶ ಕೋರಿದ ಬೆನ್ನಲ್ಲೇ ಸಮಿತಿಗಳ ಸಭೆ ನಡೆಸಲು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅನುಮತಿ ನೀಡಿದ್ದಾರೆ.

ಬೆಂಗಳೂರು: ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷ ಎಚ್‌.ಕೆ.ಪಾಟೀಲ್ ಅವರು ಸ್ಪೀಕರ್ ಅವರಿಗೆ ಪತ್ರ ಬರೆದು ಸಮಿತಿಯ ಸಭೆ ನಡೆಸಲು ಅವಕಾಶ ಕೋರಿದ ಬೆನ್ನಲ್ಲೇ ಸಮಿತಿಗಳ ಸಭೆ ನಡೆಸಲು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅನುಮತಿ ನೀಡಿದ್ದಾರೆ.

ಸಮಿತಿ ಸಭೆ ನಡೆಸುವ ವಿಷಯದಲ್ಲಿ ಸ್ಪೀಕರ್ ವಿರುದ್ಧ ಎಚ್.ಕೆ.ಪಾಟೀಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್‌ಡೌನ್ ಮಾಡಲು ಸರ್ಕಾರ ತೀರ್ಮಾನ ಕೈಗೊಂಡಿದ್ದ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಸಮಿತಿ ಸಭೆಗಳನ್ನು ನಡೆಸುವುದನ್ನು ಸ್ಥಗಿತಗೊಳಿಸಲಾಗಿತ್ತು. 

ಪ್ರಸ್ತುತ ರಾಜ್ಯದಲ್ಲಿ ಲಾಕ್‌ಡೌನ್ ತೆರವುಗೊಂಡಿರುವುದರಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು 2020ರ ಆಗಸ್ಟ್ ತಿಂಗಳಿಂದ ಕರ್ನಾಟಕ ವಿಧಾನಮಂಡಲ, ವಿಧಾನಸಭೆಯ ಎಲ್ಲಾ ಸಮಿತಿಗಳ ಸಭೆಗಳನ್ನು ನಡೆಸಲು ಸಭ್ಯಾಧ್ಯಕ್ಷರು ಅನುಮತಿ ನೀಡಿದ್ದಾರೆ ಎಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!