ಬೆಂಗಳೂರು: ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ ಪೂರೈಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಪ್ರಜಾಪ್ರಭುತ್ವ ಉಳಿಸಿ-ಸಂವಿಧಾನ ರಕ್ಷಿಸಿ ಹೆಸರಿನಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.
ನಾಳೆ ಮಧ್ಯಾಹ್ನ ರಾಜಭವನದ ಮುಂದೆ ಕಾಂಗ್ರೆಸ್ ಸಂಸದರು,ಶಾಸಕರು,ಮಾಜಿ ಶಾಸಕರು,ಮಾಜಿ ಸಂಸದರು, ಪಕ್ಷದ ಪ್ರಮುಖ ನಾಯಕರು,ಪದಾಧಿಕಾರಿಗಳು ಪ್ರತಿಭಟನೆ ನಡೆಸಲಿದ್ದಾರೆ.
ಬಿಜೆಪಿ ಸರ್ಕಾರ ಕಳೆದ ಒಂದು ವರ್ಷದಲ್ಲಿ ಅತಿವೃಷ್ಟಿ,ಬರ,ಹಾಗೂ ಕೊರೋನಾವನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ.ಆದರೆ ಸರ್ಕಾರ ಸಾಧನೆ ಸಮಾವೇಶ ನಡೆಸಲು ಮುಂದಾಗಿರುವುದನ್ನು ಖಂಡಿಸಿ ,ಪ್ರಜಾಪ್ರಭುತ್ವ ಉಳಿಸಿ ಎಂಬ ಹೆಸರಿನಲ್ಲ ಹೋರಾಟಕ್ಕಿಳಿದಿದೆ.