ಅರಣ್ಯ ಸಚಿವ ಆನಂದ್ ಸಿಂಗ್ ಗೆ ಕೊರೋನಾ ದೃಢ
ಅರಣ್ಯ ಸಚಿವ, ಹೊಸಪೇಟೆ ಶಾಸಕ ಹಾಗೂ ಬಳ್ಳಾರಿ ಜಿಲ್ಲೆ ಕೋವಿಡ್ ಉಸ್ತುವಾರಿಯಾಗಿರುವ ಆನಂದ್ ಸಿಂಗ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ.
ಬಳ್ಳಾರಿ: ಅರಣ್ಯ ಸಚಿವ, ಹೊಸಪೇಟೆ ಶಾಸಕ ಹಾಗೂ ಬಳ್ಳಾರಿ ಜಿಲ್ಲೆ ಕೋವಿಡ್ ಉಸ್ತುವಾರಿಯಾಗಿರುವ ಆನಂದ್ ಸಿಂಗ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ.
ಶುಕ್ರವಾರ ಕೋವಿಡ್ ಪರೀಕ್ಷೆ ಮಾಡಿಸಿದ್ದ ಆನಂದ್ ಸಿಂಗ್ ಅವರಿಗೆ ಶನಿವಾರ ರಾತ್ರಿ ವರದಿ ಸಿಕ್ಕಿದ್ದು ಕೊರೋನಾ ಇರುವುದು ಖಚಿತವಾಗಿದೆ. ಆದರೆ ಯಾವ ರೋಗಲಕ್ಷಣವಿಲ್ಲದೆ ಸಚಿವರಿಗೆ ಕೊರೋನಾ ಇರುವುದು ಕಂಡುಬಂದಿದೆ.
ರೋಗಲಕ್ಷಣವಿಲ್ಲದ ಕಾರಣ ಆನಂದ್ ಸಿಂಗ್ ಮನೆಯಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ. ಹೊಸಪೇಟೆ ನಿವಾಸದಲ್ಲಿ ಆನಂದ್ ಸಿಂಗ್ ಅವರಿಗೆ ಚಿಕಿತ್ಸೆ ಒದಗಿಸಲಾಗುತ್ತಿದೆ. ಸಚಿವರು ಆರೋಗ್ಯವಾಗಿದ್ದಾರೆ. ಅವರಿಗೆ ಕೊರೋನಾ ಸೋಂಕು ತಗುಲಿರುವುದು ನಿಜ. ಅವರು ಸ್ವಯಂಪ್ರೇರಿತರಾಗಿ ಕೊರೋನಾ ಪರೀಕ್ಷೆಗೆ ಒಳಗಾಗಿದ್ದರೆಂದು ಕುಟುಂಬ ಮೂಲಗಳು ಹೇಳಿದೆ
ಇತ್ತೀಚೆಗೆ ಸಚಿವರ ಕಾರು ಚಾಲಕನಿಗೆ ಕೊರೋನಾ ಕಾಣಿಸಿಕೊಂಡಿತ್ತು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.