ಸಚಿವ ಕೋಟಾ ಶ್ರೀನಿವಾಸ ಪೂಜಾರಿ (ಸಂಗ್ರಹ ಚಿತ್ರ) 
ರಾಜ್ಯ

ಮುಜರಾಯಿ ಸಿಬ್ಬಂದಿಗೆ ವಿಮಾ ಸೌಲಭ್ಯ: ಕೋಟಾ ಶ್ರೀನಿವಾಸ ಪೂಜಾರಿ

ಮಾರಕ ಕೊರೋನಾ ವರೈಸ್ ಸಾಂಕ್ರಾಮಿಕದ ನಡುವೆ ರಾಜ್ಯದ ಸಹಸ್ರಾರು ಮುಜಾರಾಯಿ ದೇವಾಲಯಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ವಿಮಾ ಸೌಲಭ್ಯ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮಂಗಳೂರು: ಮಾರಕ ಕೊರೋನಾ ವರೈಸ್ ಸಾಂಕ್ರಾಮಿಕದ ನಡುವೆ ರಾಜ್ಯದ ಸಹಸ್ರಾರು ಮುಜಾರಾಯಿ ದೇವಾಲಯಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ವಿಮಾ ಸೌಲಭ್ಯ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಟ್ಟಿರುವ ಎಲ್ಲಾ ದೇವಾಲಯಗಳಲ್ಲಿ ಕಾರ್ಯ ನಿರ್ವಹಿಸುವ ಎಲ್ಲಾ ದರ್ಜೆಯ ಸಿಬ್ಬಂದಿಗೆ ವಿಮಾ ಸೌಲಭ್ಯ ಒದಗಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

'ಅರ್ಚಕರ ಮನವಿಗೆ ಸ್ಪಂದಿಸಿ ಮುಂದಿನ ದಿನಗಳಲ್ಲಿ ಐದು ಲಕ್ಷ ರೂ. ಮೊತ್ತದ ಆರೋಗ್ಯ ವಿಮೆ ಮತ್ತು 10 ಲಕ್ಷ ರೂ. ಮೊತ್ತದ ಜೀವ ವಿಮೆ ನೀಡಲು ಯೋಜನೆ ಸಿದ್ಧಪಡಿಸಲಾಗುತ್ತಿದೆ. 34 ಸಾವಿರ ದೇವಸ್ಥಾನಗಳಲ್ಲಿ ರಾಜ್ಯದಲ್ಲಿ ಸುಮಾರು ಒಂದು ಲಕ್ಷಕ್ಕೂ ಮಿಕ್ಕಿ ಅರ್ಚಕರು ಮತ್ತು ಸಿಬ್ಬಂದಿ ಇದ್ದಾರೆ. ಇಲಾಖೆ  ಹೊರತಾದ ದೇವಳಗಳಿಂದ ಮನವಿ ಬಂದರೂ ಪರಿಗಣಿಸಲಾಗುವುದು.ಕೇಂದ್ರ ಸರ್ಕಾರದ ಜೀವನ್‌ ಜ್ಯೋತಿ, ಸುರಕ್ಷಾ ಜ್ಯೋತಿ ಮತ್ತು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ಪರ್ಸನಲ್‌ ಆ್ಯಕ್ಸಿಡೆಂಟ್‌ ವಿಮೆ ಮಾದರಿಯಲ್ಲಿ ವಿಮಾ ಸೌಲಭ್ಯ ಮಾಡುವ ಚಿಂತನೆ ಇದೆ. ಅಧಿಕಾರಿಗಳು ಪ್ರಸ್ತಾಪ ಮಂಡಿಸಲಿದ್ದಾರೆ. ಮುಂದಿನ  ದಿನಗಳಲ್ಲಿ ಬಜೆಟ್‌ ಹೊಂದಾಣಿಕೆ ಬಗ್ಗೆ ಯೋಚನೆ ನಡೆಸಲಾಗುವುದು ಎಂದು ಹೇಳಿದರು.

ಸಪ್ತಪದಿ ಯೋಜನೆ ಕೈ ಬಿಟ್ಟಿಲ್ಲ
ಇದೇ ವೇಳೆ ರಾಜ್ಯ ಸರ್ಕಾರ ಸಪ್ತಪದಿ ಯೋಜನೆ ಕೈ ಬಿಟ್ಟಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಈ ಬಗ್ಗೆ ಸಚಿವ ಸುರೇಶ್‌ ಕುಮಾರ್‌ ಅವರಲ್ಲಿ ಚರ್ಚಿಸಿ, ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಡಲ್ಕೊರೆತಕ್ಕೆ ತಾತ್ಕಾಲಿಕ ಕಲ್ಲು ಕಾಮಗಾರಿಗೆ ಸೂಚನೆ
ಉಳ್ಳಾಲದಿಂದ ಕಾರವಾರ ತನಕ ಕಡಲ್ಕೊರೆತವಾಗುತ್ತಿದ್ದು, ಜನರಿಗೆ ಸಮಸ್ಯೆಯಾಗದಂತೆ ತಾತ್ಕಾಲಿಕ ಕಲ್ಲು ಹಾಕುವ ಕಾಮಗಾರಿ ನಡೆಸಲು ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT