ಸಂಗ್ರಹ ಚಿತ್ರ 
ರಾಜ್ಯ

'ಸವಾಲುಗಳ ವರ್ಷ, ಪರಿಹಾರದ ಸ್ಪರ್ಶ': ಬಿಎಸ್'ವೈ ಸರ್ಕಾರಕ್ಕೆ ವರ್ಷದ ಸಂಭ್ರಮ, ಇಂದು ಸಾಧನೆಯ ಪುಸ್ತಕ ಬಿಡುಗಡೆ

ರಾಜ್ಯದ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಾಧನೆಯ ಪುಸ್ತಕ ಬಿಡುಗಡೆಗೊಳಿಸಿ ರಾಜ್ಯದ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಬೆಂಗಳೂರು: ರಾಜ್ಯದ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಾಧನೆಯ ಪುಸ್ತಕ ಬಿಡುಗಡೆಗೊಳಿಸಿ ರಾಜ್ಯದ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ. 

ಈ ಹಿನ್ನೆಲೆಯಲ್ಲಿ ಬೆಳಗ್ಗೆ 11 ಗಂಟೆಗೆ ಸಮಸ್ಯೆ ಸವಾಲುಗಳ ಒಂದು ವರ್ಷ, ಪರಿಹಾರದ ಸ್ಪರ್ಶ ಎಂಬ ಶೀರ್ಷಿಕೆಯಡಿ ವರ್ಚುವಲ್ ಕಾರ್ಯಕ್ರಮವನ್ನು ವಿಧಾನಸೌಧದ ಬ್ಯಾಂಕ್ವೆಟ್ ಸಂಭಾಗಣದಲ್ಲಿ ಆಯೋಜಿಸಲಾಗಿದೆ. ಸಭಾಂಗಣದಲ್ಲಿ 150 ಅಡಿ ವಿಶಾಲ ಪರದೆಯ ಮೇಲೆ ಹಾಗೂ ಏಕಕಾಲಕ್ಕೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಈ ಸಮಾರಂಭವನ್ನು ವೀಕ್ಷಿಸಬಹುದಾಗಿದೆ. 

ಈ ಕಾರ್ಯಕ್ರಮವನ್ನು ಸಾರ್ವಜನಿಕರು ಕೂಡ ನೇರ ಪ್ರಸಾರದಲ್ಲಿ ಯೂಟ್ಯೂಬ್ ನಲ್ಲಿ ವೀಕ್ಷಿಸಬಹುದಾಗಿದೆ. ಸಮಾರಂಭದಲ್ಲಿ ಯಡಿಯೂರಪ್ಪ ಅವರು ಸೇರಿದಂತೆ ಸರ್ಕಾರದ ಸಚಿವರು ಹಾಗೂ ಆಡಳಿತಾರೂಢ ಬಿಜೆಪಿಯ ಶಾಸಕರು ಪಾಲ್ಗೊಳ್ಳಲಿದ್ದಾರೆ.

ಸರ್ಕಾರದ ಸಾಧನೆಗಳನ್ನು ಒಳಗೊಂಡ ಕಿರುಹೊತ್ತಿಗೆ ಮತ್ತು ಸರ್ಕಾರದ ಕಾರ್ಯ ವೈಖರಿ ಕುರಿತು ವಿವಿಧ ಕ್ಷೇತ್ರಗಳ ಗಣ್ಯರು ಬರೆದಿರುವ ಲೇಖನಗಳ ಸಂಗ್ರಹ ಪುಸ್ತಕವನ್ನು ಈ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಿಡುಗಡೆಗೊಳಿಸಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. 

ಪುಸ್ತಕ ಬಿಡುಗಡೆ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ರಾಜ್ಯ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ದಿನಕ್ಕೆ ವರ್ಷವಾಗುತ್ತಿದ್ದು, ಸರ್ಕಾರದ ಕಾರ್ಯವೈಖರಿ ವರದಿಯನ್ನು ಜನರಿಗೆ ಸಲ್ಲಿಸಲಿದ್ದೇನೆ. ಸೋಮವಾರ ಅಂದರೆ ಜು.27ರ ಬೆಳಿಗ್ಗೆ 11 ಗಂಟೆಗೆ ಸರಳ ಆನ್'ಲೈನ್ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮವನ್ನು ನೇರಪ್ರಸಾರ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel