ಕಳಸಾ-ಬಂಡೂರಿ ನಾಲಾ ಯೋಜನೆ, ರಮೇಶ್ ಜಾರಕಿಹೊಳಿ 
ರಾಜ್ಯ

ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿ ಅನುಷ್ಠಾನಕ್ಕೆ ಆಡಳಿತಾತ್ಮಕ ಒಪ್ಪಿಗೆ: ರಮೇಶ್ ಜಾರಕಿಹೊಳಿ‌

885. 80 ಕೋಟಿ ಮೊತ್ತದ ಕಳಸಾ ನಾಲಾ ತಿರುವು ಯೋಜನೆಯ ಪರಿಷ್ಕೃತ ಯೋಜನಾ ವರದಿಗೆ  ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ  ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ‌ ನದಿಗೆ ಅಣೆಕಟ್ಟು ನಿರ್ಮಿಸಿ ಕೂಡು ಕಾಲುವೆ ಮುಖಾಂತರ 1.72 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆ ತಿರುಗಿಸುವ  885. 80 ಕೋಟಿ ಮೊತ್ತದ ಕಳಸಾ ನಾಲಾ ತಿರುವು ಯೋಜನೆಯ ಪರಿಷ್ಕೃತ ಯೋಜನಾ ವರದಿಗೆ  ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ  ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಹಾಗೆಯೇ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ನೆರಸೆ ಗ್ರಾಮದ ಬಳಿ ಬಂಡೂರ ಹಳ್ಳಕ್ಕೆ ಅಣೆಕಟ್ಟು ನಿರ್ಮಿಸಿ, ಕೂಡು ಕಾಲುವೆ ಮುಖಾಂತರ 2.18 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಬಳಸಿಕೊಳ್ಳಲು ಮಲಪ್ರಭಾ ನದಿಗೆ ತಿರುಗಿಸುವ ಬಂಡೂರಿ ನಾಲಾ ತಿರುವು ಯೋಜನೆಗೂ ಆಡಳಿತಾತ್ಮಕ ಅನುಮೋದನೆ‌ ನೀಡಿದೆ‌.

ಮಹತ್ವಾಕಾಂಕ್ಷೆಯ ಈ ಕಳಸಾ - ಬಂಡೂರಿ ಕುಡಿಯುವ ನೀರಿನ‌ ಯೋಜನೆಗಳ ವಿಸ್ತೃತ ಯೋಜನಾ ವರದಿಗೆ ತಾತ್ವಿಕ ಆಡಳಿತಾತ್ಮಕ‌ ಅನುಮೋದನೆ‌ ನೀಡಿದ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅಭಿನಂದಿಸಿದ್ದಾರೆ.

ರಾಜ್ಯ ಸರ್ಕಾರವು ಒಂದು ವರ್ಷದ ಅವಧಿಯನ್ನು ಪೂರ್ಣಗೊಳಿಸುತ್ತಿರುವ ಈ ಸುಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದ ಬಹು ದಿನಗಳ ಬೇಡಿಕೆಯಾಗಿದ್ದ ಈ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕೆ ಈ ಸರ್ಕಾರ ಕಟಿಬದ್ಧವಾಗಿದ್ದು, ಶೀಘ್ರದಲ್ಲಿಯೇ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಈ ಯೋಜನೆಯ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ರಮೇಶ್ ಜಾರಕಿಹೊಳಿ‌ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT