ಹೈಕೋರ್ಟ್ 
ರಾಜ್ಯ

ಕೊರೋನಾ ಹಿನ್ನೆಲೆ: ಸಿಇಟಿ ಪರೀಕ್ಷೆ ನಡೆಸುವ ನಿರ್ಧಾರ ಮರುಪರಿಶೀಲಿಸಿ; ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ನಿಗದಿಯಾಗಿರುವ ಸಿಇಟಿ ಪರೀಕ್ಷೆ ನಡೆಸುವ ಸಂಬಂಧ ನಿರ್ಧಾರವನ್ನು ಮರುಪರಿಶೀಲಿಸಿ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. 

ಬೆಂಗಳೂರು: ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ನಿಗದಿಯಾಗಿರುವ ಸಿಇಟಿ ಪರೀಕ್ಷೆ ನಡೆಸುವ ಸಂಬಂಧ ನಿರ್ಧಾರವನ್ನು ಮರುಪರಿಶೀಲಿಸಿ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. 

ಜುಲೈ 30,  ಆಗಸ್ಟ್ 1ರಂದು ಸಿಇಟಿ ಪರೀಕ್ಷೆ ನಿಗದಿಯಾಗಿದ್ದು ಕೊರೋನಾವಿರುವ ಕಂಟೈನ್ಮೆಂಟ್ ಜೋನ್ ಗಳಲ್ಲಿರುವವರು ಹೊರ ಹೋಗುವಂತಿಲ್ಲ. ಅಲ್ಲದೆ ಹೊರರಾಜ್ಯಗಳಿಂದ ಬಂದೂ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯುತ್ತಾರೆ. ಕೊರೊನಾ ಎಸ್ಓಪಿಯ ಅನುಸಾರ ಕಂಟೈನ್ಮೆಂಟ್ ಜೋನ್ ನಲ್ಲಿರುವವರು ಹೊರಗೆ ಹೋಗುವಂತಿಲ್ಲ. ಬೆಂಗಳೂರಿನಲ್ಲೇ ಮೂರು ಸಾವಿರದಷ್ಟು ಕಂಟೈನ್ಮೆಂಟ್ ಜೋನ್ ಗಳಿದೆ. ಹಾಗಾಗಿ ಅಲ್ಲಿನ ವಿದ್ಯಾರ್ಥಿಗಳು ಎಲ್ಲಿ ಹೋಗುತ್ತಾರೆ? ಅವರು ಪರೀಕ್ಷೆಯಿಂದ ವಂಚಿತರಾಗುವ ಸಾಧ್ಯತೆ ಇದೆ ಎಂದಿರುವ ಹೈಕೋರ್ಟ್ ಪರೀಕ್ಷೆ ನಡೆಸುವ ನಿರ್ಧಾರವನ್ನು ಮರುಪರಿಶೀಲಿಸಿ ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ವಕೀಲರಾದ ಎಸ್.ಪಿ. ಪ್ರದೀಪ್ ಕುಮಾರ್ ಹಾಗೂ ಎಸ್. ಹನುಮಂತೇಗೌಡ  ಎನ್ನುವವರು ಈ ಸಂಬಂಧ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. 

ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ನ್ಯಾಯಪೀಠ ನಿರ್ಧಾರದ ಮರುಪರಿಶೀಲನೆಗೆ ಸೂಚಿಸಿದ್ದು ಬುಧವಾರ ಮಧ್ಯಾಹ್ನ 2:30ರೊಳಗೆ ಉತ್ತರಿಸುವಂತೆ ಹೇಳಿ ವಿಚಾರಣೆ ಮುಂದೂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!