ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ: ಸರ್ಕಾರದ ಖಡಕ್ ಎಚ್ಚರಿಕೆ

ಯಾವುದೇ ಕಾರಣಕ್ಕೂ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀರಾಕರಿಸುವತಿಲ್ಲ. ಒಂದು ವೇಳೆ ಆದೇಶ ಮೀರಿ ನಡೆದುಕೊಂಡರೆ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ.

ಕೋವಿಡ್ ನಿರ್ವಹಣೆಗೆ ಸಿಬ್ಬಂದಿ ಕೊರತೆ ನಿವಾರಿಸಲು ಸಚಿವ ಸುಧಾಕರ್ ಸೂಚನೆ
Srinivasa Murthy VN
Updated On : 28 Jul 2020, 11:52 am

ಬೆಂಗಳೂರು: ಯಾವುದೇ ಕಾರಣಕ್ಕೂ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀರಾಕರಿಸುವತಿಲ್ಲ. ಒಂದು ವೇಳೆ ಆದೇಶ ಮೀರಿ ನಡೆದುಕೊಂಡರೆ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು, 'ಕೋವಿಡ್ ಟೆಸ್ಟ್ ವರದಿ ಇಲ್ಲವೆಂದು ಯಾವುದೇ ಖಾಸಗಿ ಆಸ್ಪತ್ರೆಯೂ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ. ಕೊರೊನಾ ಲಕ್ಷಣವಿರಲಿ ಅಥವಾ ಬೇರೆ ಯಾವುದೇ ಖಾಯಿಲೆ ಇರಲಿ ಆಸ್ಪತ್ರೆಯಲ್ಲಿ ಹಾಸಿಗೆ ಲಭ್ಯವಿದ್ದೂ ದಾಖಲಾತಿ ನಿರಾಕರಿಸಿದರೆ ಅಂತಹ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಅಂತೆಯೇ 'ನಟಿ ಸುಧಾರಾಣಿ ಅವರ ಅಣ್ಣನ ಪುತ್ರಿಯ ಅರೋಗ್ಯ ಸಮಸ್ಯೆಯಿಂದ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಗೆ ಬಂದರೂ ಚಿಕಿತ್ಸೆಗೆ ತಡಮಾಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ನೋಡಿದೆ. ಅವರಷ್ಟೇ ಅಲ್ಲ ಸಾಮಾನ್ಯ ವ್ಯಕ್ತಿ ಯಾರೇ ಆಗಲಿ ಚಿಕಿತ್ಸೆ ಸಿಗದೇ ಪರದಾಡಬಾರದು. ಆ ಖಾಸಗಿ ಆಸ್ಪತ್ರೆಯ ವಿರುದ್ಧ ಶಿಸ್ತು ಕ್ರಮವಹಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Advertisement

Advertisement

ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಆರೋಗ್ಯ ಸಚಿವ ಶ್ರೀರಾಮುಲು ಅವರು, 'ರಾಜ್ಯದ ಯಾವುದೇ ಖಾಸಗಿ ವೈದ್ಯಕೀಯ ಸಂಸ್ಥೆಗಳು ಕೋವಿಡ್ ಸೋಂಕು ಅಥವಾ ಕೋವಿಡ್ ಸೋಂಕಿನಂತಹ ರೋಗ ಲಕ್ಷಣಗಳುಳ್ಳ ರೋಗಿಗಳನ್ನು ದಾಖಲಿಸಿಕೊಳ್ಳಲು ನಿರಾಕರಿಸುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments