ಸಚಿವ ಸುರೇಶ್ ಕುಮಾರ್ 
ರಾಜ್ಯ

ಶಾಲೆ ತೆರೆಯಲು ಯಾವುದೇ ಅವಸರವಿಲ್ಲ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಕೊರೋನಾ ಸೋಂಕು ತೀವ್ರವಾಗುತ್ತಿರುವ ಈ ಕಾಲಘಟ್ಟದಲ್ಲಿ ಶಾಲೆಗಳನ್ನು ತೆರೆಯುವ ಅವಸರ ಸರ್ಕಾರಕ್ಕಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಹೇಳಿದ್ದಾರೆ. 

ಬೆಂಗಳೂರು: ಕೊರೋನಾ ಸೋಂಕು ತೀವ್ರವಾಗುತ್ತಿರುವ ಈ ಕಾಲಘಟ್ಟದಲ್ಲಿ ಶಾಲೆಗಳನ್ನು ತೆರೆಯುವ ಅವಸರ ಸರ್ಕಾರಕ್ಕಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಹೇಳಿದ್ದಾರೆ. 

ಕೊರೋನಾ ಸಾಮಾಜಿಕ ಸಂದರ್ಭದಲ್ಲಿ ಆನ್ ಲೈನ್ ಶಿಕ್ಷಣ ಮತ್ತು ಶಾಲಾ ಚಟುವಟಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಶೈಕ್ಷಣಿಕ ವಲಯದ ಸರ್ಕಾರೇತರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ವೆಬಿನಾರ್ ನಲ್ಲಿ ಮಾತನಾಡಿದ ಅವರು, ಈ ಪರಿಸ್ಥಿತಿಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಅವಸರದಲ್ಲಿ ಶಾಲೆ ತೆರೆಯುವುದಿಲ್ಲ. ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಎಲ್ಲ ಆಯಾಮಗಳಿಂದಲೂ ಪ್ರಯತ್ನ ಮಾಡಲಾಗುತ್ತದೆ ಎಂದರು.

ಇಂತಹ ಪರಿಸ್ಥಿತಿ ಇದೇ ಮೊದಲ ಬಾರಿ ಬಂದೆರಗಿರುವುದರಿಂದ ಈ ಸಂದರ್ಭದಲ್ಲಿ ಮಕ್ಕಳನ್ನು ತಲುಪಲು ಸಾಧ್ಯವಾಗಬಹುದಾದ ಎಲ್ಲ ಪ್ರಯತ್ನಗಳ ಬಗ್ಗೆ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ವಠಾರ ಶಾಲೆ, ಪಡಸಾಲೆ ಶಾಲೆ, ಮನೆಶಾಲೆ, ತಂತ್ರಜ್ಞಾನಾಧಾರಿತ ಶಿಕ್ಷಣ, ಆಕಾಶವಾಣಿ, ಚಂದನ ದೂರದರ್ಶನ ವಾಹಿನಿ, ಖಾಸಗಿ ವಾಹಿನಿ, ಶಿಕ್ಷಣ ಇಲಾಖೆಯ ಚಾನೆಲ್ ಸೇರಿದಂತೆ ಲಭ್ಯವಾಗಬಹುದಾದ ಎಲ್ಲ ಅವಕಾಶವನ್ನೂ ಮುಕ್ತವಾಗಿರಿಸಿಕೊಂಡು ಶಿಕ್ಷಣ ಇಲಾಖೆ ಎಲ್ಲ ಉಪಕ್ರಮಗಳತ್ತಲೂ ಮಕ್ಕಳ ಹಿತದೃಷ್ಟಿಯಿಂದ ಯೋಚಿಸುತ್ತಿದೆ ಎಂದು ಹೇಳಿದರು.

ಈ ಎಲ್ಲ ಸಾಮೂಹಿಕ ಪ್ರಯತ್ನಗಳು ಗಟ್ಟಿರೂಪ ಪಡೆದು ವಿಕೇಂದ್ರಿಕೃತ ಕಲಿಕೆಯು ಮಕ್ಕಳಿಗೆ ಉಪಯುಕ್ತವಾಗುವ ರೀತಿಯಲ್ಲಿ ನಮ್ಮ ಪ್ರಯತ್ನಗಳು ಇರಬೇಕೆನ್ನುವ ಅಭಿಪ್ರಾಯಗಳು ನಾವು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬಹುದಾದ ನಿರ್ಣಯಗಳಿಗೆ ಒಂದು ಸ್ಪಷ್ಟ ದಿಕ್ಕನ್ನು ಮೂಡಿಸಿವೆ. ಈ ಎಲ್ಲ ಸಲಹೆಗಳನ್ನು ಕ್ರೂಢೀಕರಿಸಿ ದಾಖಲಿಸಿ ಆಯಾ ಸಂದರ್ಭ, ಆಯಾ ಪ್ರದೇಶಕ್ಕನುಗುಣವಾಗಿ ಜಾರಿಯಲ್ಲಿಡುವ ಬಗ್ಗೆಯೂ ಚಿಂತನೆ ನಡೆಸಲಾಗುವುದು ಎಂದು ಸುರೇಶ್ ಕುಮಾರ್ ಅಭಿಪ್ರಾಯಪಟ್ಟರು. 

ಅಜೀಂ ಪ್ರೇಮ್ ಜಿ ಪ್ರತಿಷ್ಠಾನ, ಗ್ರಾಮ್ಸ್, ಅಕ್ಷರ ಫೌಂಡೇಷನ್, ಯೂನಿಸೆಫ್, ಶಿಕ್ಷಣ, ಸಿಇಇ (ವಾಷ್ ಪ್ರೋಗ್ರಾಂ), ಪೋತ್ವೇವ್ ಫೌಂಡೇಷನ್, ಪ್ರಥಮ್, ಪ್ರಜಾಯತ್ನ, ಅಗಸ್ತ್ಯ ಫೌಂಡೇಷನ್, ಲೆಂಡ್ ಎ ಹ್ಯಾಂಡ್ಇಂಡಿಯಾ, ವೈಟ್ಫೀಲ್ಡ್ರೆಡಿ ಸಮೃದ್ಧಿ ಟ್ರಸ್ಟ್, ಇಂಡಿಯನ್ ಲಿಟ್ರೆಸಿ ಪ್ರಾಜೆಕ್ಟ್, ಬಿಜಿವಿಎಸ್, ಎಸ್ಟಿಐಆರ್, ಏಕ್ ಸ್ಟೆಪ್-ದೀಕ್ಷಾ, ರೂಂಟುರೀಡ್ಇಂಡಿಯಾಟ್ರಸ್ಟ್, ಗ್ರಾಮ್, ಐ.ಎಲ್.ಪಿ. ಸೇರಿದಂತೆ ಹಲವಾರು ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಸಂವಾದದಲ್ಲಿ ಭಾಗವಹಿಸಿದವರು ಮಕ್ಕಳೇ ಪ್ರಮುಖವಾಗಿದ್ದು, ಅವರನ್ನು ಈ ಪರಿಸ್ಥಿತಿಯಲ್ಲಿ ಕಲಿಕೆಯಲ್ಲಿ ತೊಡಗಿಸಿಕೊಳ್ಳುವಲ್ಲಿ ಎಲ್ಲ ರೀತಿಯ ಸಾಧ್ಯತೆಗಳನ್ನು ಕ್ರೋಢೀಕರಿಸಿಕೊಂಡು, ಯಾವುದೇ ಸೌಲಭ್ಯದ ಮೂಲಕವಾಗಲಿ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಸರ್ಕಾರ ಮುಂದಾಗಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು. 

ಸಂವಾದದಲ್ಲಿ ವ್ಯಕ್ತವಾದ ಅಭಿಪ್ರಾಯಗಳು
• ಯೂ-ಟ್ಯೂಬ್, ವಾಟ್ಸಪ್ ಸೇರಿದಂತೆ ಯಾವುದರ ಮೂಲಕವೇ ಆದರೂ ಮಕ್ಕಳು ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಮಕ್ಕಳು ಹೆಚ್ಚು ದಿನ ಐಡಲ್ ಆಗಿ ಇರುವಂತಾಗಬಾರದು. ನೇರ ಪ್ರಸಾರ, ರೆಕಾರ್ಡೆಡ್ ಪಾಠದ ಮಾದರಿಯ ತರಗತಿಗಳೂ ಆಗಬಹುದು. 
• ಶಾಲೆಗಳ ಗ್ರಂಥಾಲಯಕ್ಕೆ ದಿನ ಬಿಟ್ಟು ದಿನ ಮಕ್ಕಳು ಬಂದು ಪಾಠ ಪಡೆದುಅದನ್ನು ಓದಿ ಮತ್ತೊಂದು ದಿನ ಬಂದು ಅದನ್ನು ಒಪ್ಪಿಸುವುದು. 
• ಈ ಹಂತದಲ್ಲಿ ಸಿಲೆಬಸ್ ಮುಖ್ಯವಲ್ಲ, ಕಲಿಕೆಯ ಅಂತರವನ್ನು ನಿವಾರಿಸುವುದು ಮುಖ್ಯವಾಗಬೇಕು. ಅದಕ್ಕಾಗಿ ಪಠ್ಯೇತರ ಚಟುವಟಿಕೆಗಳೇ ಆದರೂ ಸರಿ. ಅವುಗಳನ್ನೇ ಕಲಿಸುವ ಪ್ರಯತ್ನ ನಡೆಯಬೇಕು. 
• ಪ್ರಸ್ತುತ ಶೈಕ್ಷಣಿಕ ವರ್ಷ ಮತ್ತು ಮುಂದಿನ ಶೈಕ್ಷಣಿಕ ವರ್ಷದ ಪಠ್ಯದ ಕುರಿತು ಒಂದು ಹೈಬ್ರಿಡ್ ಪ್ಲಾನ್ ಮಾಡಿ ಮಕ್ಕಳನ್ನು ತಲುಪಬೇಕು.
• ಸಮುದಾಯ ಆಧಾರಿತ ಕೇಂದ್ರಗಳು, ನೆರೆಹೊರೆ ಮಕ್ಕಳ ಗುಂಪು, ಗ್ರಾಮದಲ್ಲಿರುವ ಶಿಕ್ಷಕರು, ಶಿಕ್ಷಕ ಪದವೀಧರರು, ಶಿಕ್ಷಕ ತರಬೇತಿ ಪಡೆದವರು, ಸ್ವಯಂ ಸೇವಕರನ್ನು ಈ ಹಂತದಲ್ಲಿ ಬಳಸಿಕೊಳ್ಳಬೇಕು.
• ಇಂತಹ ಪ್ರಯತ್ನಜಾರಿಯಲ್ಲಿ ಆಯಾಗ್ರಾಮ ಪಂಚಾಯ್ತಿ ಸದಸ್ಯರು, ಅಧಿಕಾರಿಗಳನ್ನು ಬಳಸಿಕೊಂಡು ಪರಿಣಾಮಕಾರಿಯಾಗಿ ಹೆಜ್ಜೆ ಇಡಬೇಕು. 
• ಕೋವಿಡ್ ಒಂದು ಅವಕಾಶವೆಂದು ಪರಿಗಣಿಸಿ ಆ ಸಮಯದಲ್ಲಿ ಮಕ್ಕಳನ್ನು ಕೇವಲ ಪಠ್ಯಕ್ಕೆ ಸೀಮಿತಗೊಳಿಸದೇ ಇತರೆ ಚಟುವಟಿಕೆಗಳಲ್ಲಿ ತೊಡಗಿಸಲು ಮುಂದಾಗಬೇಕು.
• ತಂತ್ರಜ್ಞಾನಾಧಾರಿತ ಶಿಕ್ಷಣ ನೀಡುವಾಗಅದು ಮಕ್ಕಳಿಗೆ ಸಮರ್ಪಕಾಗಿ ತಲುಪುತ್ತಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸುವ ವ್ಯವಸ್ಥೆ ಸಹ ಮುಖ್ಯವಾಗುತ್ತದೆ. 
• ಸದ್ಯದ ಪರಿಸ್ಥಿತಿಯಲ್ಲಿ ಶಾಲೆಗಳು ಆರಂಭಿಸುವ ಸಾಧ್ಯತೆಗಳು ಇಲ್ಲದಿರುವ ಹಿನ್ನೆಲೆಯಲ್ಲಿ ಲಭ್ಯವಿರುವ ಸಂಪನ್ಮೂಲಗಳ ಆಧಾರದಲ್ಲಿ ವಿಕೇಂದ್ರೀಕರಣಗೊಳಿಸಿ ಮಕ್ಕಳ ಹಿತದೃಷ್ಟಿಯಿಂದ ಪರ್ಯಾಯ ಕಲಿಕಾ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಮುಂದಾಗಬೇಕು. 
• ಪ್ರಯತ್ನಗಳತ್ತಲೇ ನಾವು ಚಿಂತಿಸುತ್ತಾಕೂರುವ ಬದಲು ಅವುಗಳನ್ನು ಜಾರಿಗೆತಂದು ಮಕ್ಕಳನ್ನು ತಲುಪುವುದಕ್ಕೆ ಮೊದಲ ಆದ್ಯತೆ ನೀಡಬೇಕಾದಅಗತ್ಯ ಹೆಚ್ಚಾಗಿದೆ.
• ಆಯಾ ಪರಿಸ್ಥಿತಿಯಲ್ಲಿ ಲಭ್ಯವಿರುವಯಾವುದೇ ಅವಕಾಶ ಇಲ್ಲವೇ ಸೌಲಭ್ಯವನ್ನೂ ಈ ಸಂದರ್ಭದಲ್ಲಿ ಬಳಸಿಕೊಳ್ಳುವುದು ಒಳ್ಳೆಯದು. ಪ್ರಸ್ತುತ ಸಂದರ್ಭದಲ್ಲಿಯೂ ಗ್ರಾಮಗಳಲ್ಲಿ ಮಕ್ಕಳು ತಮ್ಮ ಶಾಲೆ ಬಳಿಯೇ ಬಂದು ದಿನಂಪ್ರತಿ ಆಟವಾಡುತ್ತಿದ್ದಾರೆ. ಮಕ್ಕಳಿಗೆ ಶಾಲಾ ತರಗತಿಗಳೇ ಅಚ್ಚುಮೆಚ್ಚು. ಸುರಕ್ಷಿತ ವಾತಾವರಣವೆಂದು ಕಂಡುಬಂದ ಕಡೆಗಳಲ್ಲಿಶಾಲಾ ತರಗತಿಗಳನ್ನೇ ಪ್ರಾರಂಭಿಸಿದರೆ ತ್ಪಪ್ಪೇನು ಇಲ್ಲ.
• ಆಯಾ ಪ್ರದೇಶದಲ್ಲಿ ಆಯಾ ನೆಲೆಯಲ್ಲಿ ಸಾಧ್ಯವಾಗಬಹುದಾದ ಆವಕಾಶಗಳನ್ನು ಬಳಸಿಕೊಳ್ಳಲು ಸರ್ಕಾರ ಮುಂದಾಗಬೇಕು.
ಸಂವಾದದಲ್ಲಿಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು, ಹಿರಿಯ ಶಿಕ್ಷಣ ತಜ್ಞರಾದ ಎಂ.ಕೆ. ಶ್ರೀಧರ್, ಡಾ. ಗುರುರಾಜ ಕರ್ಜಗಿ, ಡಾ. ವಿ.ಪಿ. ನಿರಂಜನಾರಾಧ್ಯ, ಪ್ರಾಥಮಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಶಿಕ್ಷಣ ಇಲಾಖೆ ಆಯುಕ್ತ ಡಾ. ಕೆ.ಜಿ.ಜಗದೀಶ್, ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾಧಿಕಾರಿ ದೀಪಾ ಚೋಳನ್ ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!