ಸುರೇಶ್ ಕುಮಾರ್ 
ರಾಜ್ಯ

ಬೆಂಗಳೂರಿನ ಪ್ರತಿ ವಾರ್ಡ್ ಗಳಲ್ಲಿ ಕೋವಿಡ್-19 'ವಾರ್ ರೂಂ' ಆರಂಭ: ಸುರೇಶ್ ಕುಮಾರ್

ನಗರದಲ್ಲಿ ಕೊರೋನಾ ವೈರಸ್  ವ್ಯಾಪಕವಾಗಿ ಹರುಡುತ್ತಿರುವದರಿಂದ‌ ಬೊಮ್ಮನಳ್ಳಿ ವಲಯದ ವ್ಯಾಪ್ತಿಯ ಪ್ರತಿ ವಾರ್ಡ್ ನಲ್ಲಿ ಕೋವಿಡ್ -19 ' ವಾರ್ ರೂಂ' ಆರಂಭಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದರು.

ಬೆಂಗಳೂರು: ನಗರದಲ್ಲಿ ಕೊರೋನಾ ವೈರಸ್  ವ್ಯಾಪಕವಾಗಿ ಹರುಡುತ್ತಿರುವದರಿಂದ‌ ಬೊಮ್ಮನಳ್ಳಿ ವಲಯದ ವ್ಯಾಪ್ತಿಯ ಪ್ರತಿ ವಾರ್ಡ್ ನಲ್ಲಿ  ಕೋವಿಡ್ -19 ' ವಾರ್ ರೂಂ' ಆರಂಭಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ  ಸಚಿವ  ಎಸ್. ಸುರೇಶ್ ಕುಮಾರ್  ತಿಳಿಸಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬೊಮ್ಮನಹಳ್ಳಿ ವಲಯದ ಉತ್ತರಹಳ್ಳಿ, ವಸಂತಪುರ, ಬೊಮ್ಮನಹಳ್ಳಿ ಮತ್ತು ಹೆಚ್, ಎಸ್. ಆರ್. ಲೇಔಟ್ ವಾರ್ಡ್‌ಗಳಲ್ಲಿ ನೂತನವಾಗಿ ಪ್ರಾರಭಿಸಿರುವ  ಕೋವಿಡ್ 'ವಾರ್' ರೂಂ ಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಗರದಲ್ಲಿ ಕೋವಿಡ್-19 ವಿರುದ್ಧ  ಬೊಮ್ಮನಹಳ್ಳಿ ವಲಯದ ಕೋವಿಡ್-19 " ವಾರ್" ರೂಂ ಆರಂಭಿಸಲಾಗಿದೆ. ಕೋವಿಡ್ ಗೆ ಸಂಬಂಧಿಸಿದಂತೆ  ಸಾರ್ವಜನಿಕರು ಸಮಸ್ಯೆಗಳು ಬಂದಾಗ ತಕ್ಷಣವೇ ಸ್ಪಂದಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು. ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರತಿ ವಾರ್ಡ್ ಗಳಲ್ಲಿ ಒಂದೊಂದು ಕೋವಿಡ್-19 ವಾರ್ ರೂಂ ನ್ನು ಆರಂಭಿಸಲಾಗುತ್ತದೆ. ಬೊಮ್ಮನಹಳ್ಳಿ ವಲಯದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕೊರೊನಾ ವೈರಸ್ ನ್ನು ಕಡಿಮೆ ಮಾಡುವುದಲ್ಲದೇ  ಯಾರಿಗೆ ಅಗತ್ಯವಿದೆ ಅವರಿಗೆ ತುರ್ತಾಗಿ ಆಸ್ಪತ್ರೆಗೆ ಸೇರಿಸಿ ಸೂಕ್ತವಾದ ಚಿಕಿತ್ಸೆ ನೀಡಬೇಕು ಎಂದರು.

ಯಾವುದೇ ಕುಟುಂಬದಲ್ಲಿ ಯಾರೂ ಕೊರೊನಾ ವೈರಸ್ ನಿಂದ ಸಾವನ್ನಪ್ಪಬಾರದು ಎಂಬ ಉದ್ದೇಶದಿಂದ ಕೋವಿಡ್ -19 "ವಾರ್" ರೂಂ ಆರಂಭಿಸಲಾಗಿದೆ. ಪ್ರತಿ ಬೂತ್ ಮಟ್ಟದಲ್ಲಿ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆರು ಮನೆ ಮನೆಗೆ ಹೋಗಿ ಹೋಂ ಐಸೋಲೇಶನ್ ಇರುವವರ ಬಗ್ಗೆ ನಿಗಾ ವಹಿಸಬೇಕು. ಜನರಲ್ಲಿ ಕೊರೊನಾ ವೈರಸ್ ಬಗ್ಗೆ ಅರಿವು
ಮೂಡಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂಧರ್ಭದಲ್ಲಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಎಂ. ಕೃಷ್ಣಪ್ಪ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ, ಪಶು ಮತ್ತು ಸಂಗೋಪನಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕ್ಯಾಪ್ಟನ್ ಪಿ. ಮಣಿವಣ್ಣನ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT