ವಿಧಾನಸೌಧ 
ರಾಜ್ಯ

ರಾಜ್ಯ ಸರ್ಕಾರದಿಂದ ಅನ್ ಲಾಕ್ 3 ಮಾರ್ಗಸೂಚಿ ಬಿಡುಗಡೆ: ಭಾನುವಾರ ಲಾಕ್ ಡೌನ್ ರದ್ದು, ರಾತ್ರಿ ಕರ್ಫ್ಯೂ ಸಹ ತೆರವು

ಕೇಂದ್ರ ಸರ್ಕಾರ ಅನ್ ಲಾಕ್-3 ಮಾರ್ಗಸೂಚಿ ಬಿಡುಗಡೆ ಮಾಡಿದ ಮಾರನೇ ದಿನವೇ ರಾಜ್ಯ ಸರ್ಕಾರ ಸಹ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಆಗಸ್ಟ್ 2ರಿಂದಲೇ ಜಾರಿಗೆ ಬರುವಂತೆ ಭಾನುವಾರದ ಲಾಕ್ ಡೌನ್ ಅನ್ನು ರದ್ದುಗೊಳಿಸಿದೆ.

ಬೆಂಗಳೂರು: ಕೇಂದ್ರ ಸರ್ಕಾರ ಅನ್ ಲಾಕ್-3 ಮಾರ್ಗಸೂಚಿ ಬಿಡುಗಡೆ ಮಾಡಿದ ಮಾರನೇ ದಿನವೇ ರಾಜ್ಯ ಸರ್ಕಾರ ಸಹ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಆಗಸ್ಟ್ 2ರಿಂದಲೇ ಜಾರಿಗೆ ಬರುವಂತೆ ಭಾನುವಾರದ ಲಾಕ್ ಡೌನ್ ಅನ್ನು ರದ್ದುಗೊಳಿಸಿದೆ.

ರಾಜ್ಯ ಸರ್ಕಾರ, ಕೇಂದ್ರ ಸರ್ಕಾರದ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸಿದ್ದು, ಆಗಸ್ಟ್ 5ರಿಂದ ಜಾರಿಗೆ ಬರುವಂತೆ ರಾಜ್ಯದಲ್ಲಿ ಜಿಮ್ ಮತ್ತು ಯೋಗ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಿದೆ. ಅಲ್ಲದೆ ರಾತ್ರಿ ಕರ್ಫ್ಯೂ ಸಹ ರದ್ದುಗೊಳಿಸಿದೆ.

ಕೋವಿಡ್‌ ಸೋಂಕು ಹೆಚ್ಚುತ್ತಲೇ ಇರುವುದರಿಂದ ಆಗಸ್ಟ್‌ 31ರವರೆಗೂ ಶಾಲಾ, ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಲು ಅನುಮತಿ ನೀಡಿಲ್ಲ.

ಸದ್ಯಕ್ಕೆ ಮೆಟ್ರೋ ಸಂಚಾರ, ಚಿತ್ರಮಂದಿರ, ಸ್ವಿಮ್ಮಿಂಗ್ ಪೂಲ್, ಮನರಂಜನಾ ಉದ್ಯಾನವನ, ತೆರೆಯುವುದಕ್ಕೆ ಅನುಮತಿ ನೀಡಲಾಗಿಲ್ಲ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜನರು ಗುಂಪು ಸೇರುವುದರ ಮೇಲಿದ್ದ ನಿರ್ಬಂಧವನ್ನು ಮುಂದುವರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬರದ ನಡುವೆ ರಾಜ್ಯಕ್ಕೆ ಮತ್ತೊಂದು ಹೊರೆ: ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡಲು CWRC ಆದೇಶ!

ರಾಹುಲ್ ಗಾಂಧಿಗೆ ಮದ್ವೆ ಆಗುವಂತೆ ಮನವೊಲಿಸಿ: CJP ವೈರಲ್ ಪ್ರತಿಭಟನಾಕಾರನ ಬಳಿ ಪ್ರಿಯಾಂಕಾ ಗಾಂಧಿ ಮನವಿ!

ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್ ನಾಯಕರಲ್ಲಿ ಕ್ಷಮೆಯಾಚಿಸಿದ ಜಮೀರ್‌ ಅಹ್ಮದ್ ಖಾನ್; ಇಲ್ಲಿದೆ ಅಸಲಿ ಕಾರಣ...

NEET ಪ್ರತಿಭಟನೆ: 18 ವರ್ಷದೊಳಗಿನ ವಿದ್ಯಾರ್ಥಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ; ಸಾಕ್ಷ್ಯ ಸಂರಕ್ಷಣೆಗೆ ಸೂಚನೆ..!

ಎಲ್ಲಕ್ಕೂ AI ಇರುವಾಗ 'ವೈದ್ಯಕೀಯ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳೇಕೆ 10 ವರ್ಷ ವ್ಯಯಿಸಬೇಕು? ನೀಟ್‌ಗೆ ಏಕೆ ತಯಾರಿ ನಡೆಸಬೇಕು?: Ramgopal Verma