ರಾಜ್ಯ

ಜಿಂಕೆ ಕೊಂಬು ಮಾರಾಟ ಯತ್ನ: ಮೂವರು ಆರೋಪಿಗಳ ಬಂಧನ

Raghavendra Adiga

ಬೆಂಗಳೂರು: ಅಕ್ರಮವಾಗಿ ಜಿಂಕೆ ಕೊಂಬುಗಳನ್ನು ಇಟ್ಟುಕೊಂಡು ಮಾರಾಟ ಮಾಡಲು ತೊಡಗಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಆರೋಪಿಗಳಿಂದ ಎರಡು ಜಿಂಕೆ ಕೊಂಬು, 1 ಇನ್ನೋವಾ ಕಾರು, ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ  ತಾಲೂಕಿನ ಕೊಣಂದೂರು ಸಿ.ಕೆ.ರಸ್ತೆ ನಿವಾಸಿ ಸುಂದರೇಶ್ (30), ಬೆಂಗಳೂರಿನ ಮುತ್ಯಾಲನಗರ 2ನೆ ಕ್ರಾಸ್ ಮಂಜು (46) ಹಗೂ ಶಿವಮೊಗ್ಗದ ತೀರ್ಥಹಳ್ಳಿಯ ಅರಳಾಪುರದ ವದಲ  ಗ್ರಾಮದ ನಿವಾಸಿ ರಾಘವೇಂದ್ರ (23) ಬಂಧಿತ ಆರೋಪಿಗಳು.

ಆರೋಪಿಗಳು ಆರ್‌ಎಂಆಸಿ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಯಶವಂತಪುರ ಇಂಡಸ್ಟ್ರೀಸ್‌ ಸಬ್‌ ಆರ್ಬ್‌ನಲ್ಲಿರುವ ಇಆರ್‌ಐ ಎಲೆಕ್ಟ್ರಾನಿಕ್ ರಿಲೇಶ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯ ಪಕ್ಕದ ರಸ್ತೆಯಲ್ಲಿ ಜಿಂಕೆಯ ಕೊಂಬುಗಳನ್ನು ಇಟ್ಟುಕೊಂಡು ನಿಂತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ವಿಶೇಷ ವಿಚಾರಣಾ ದಳದ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ  ಬಂಧಿಸಿದ್ದಾರೆ.

ಆರೋಪಿಗಳಿಂದ ಎರಡು ಜಿಂಕೆ ಕೊಂಬುಗಳು, ಒಂದು ಕಾರು 3 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಪೊಲೀಸ್ ಠಾಣೆಯ ಆಯುಕ್ತ ಸಂದೀಪ್ ಪಾಟೀಲ್, ಉಪ ಪೊಲೀಸ್ ಆಯುಕ್ತ ಕುಲದೀಫ್ ಕುಮಾರ್ ಜೈನ್ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ವಿಶೇಷ ವಿಚಾರಣಾ ದಳದ ಸಹಾಯಕ ಪೊಲೀಸ್ ಆಯುಕ್ತರಾದ ವಿರೂಪಾಕ್ಷಪ್ಪ ಅವರ ನೇತೃತ್ವದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ರವಿಪಾಟೀಲ್ ಮತ್ತು ಸಿಬ್ಬಂದಿ ಕೈಗೊಂಡಿದ್ದಾರೆ

SCROLL FOR NEXT