ರಾಜ್ಯ

ಇಂದಿನಿಂದ ರಾತ್ರಿ 9 ಗಂಟೆವರೆಗೆ ಕೆಎಸ್ಆರ್ ಟಿಸಿ ಬಸ್ ಸಂಚಾರ

Srinivasamurthy VN

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಐದನೇ ಹಂತದ ಲಾಕ್ ಡೌನ್ ಜಾರಿಯಾಗಿದ್ದು, ರಾತ್ರಿ 9 ಗಂಟೆ ವರೆಗೆ ಎಲ್ಲಾ ರೀತಿಯ ಚಟುವಟಿಕೆಗಳು ಅಬಾಧಿತವಾಗಿ ನಡೆಯಲಿವೆ. 

ಕೆ.ಎಸ್.ಆರ್.ಟಿ.ಸಿ ಬಸ್ ಗಳು ರಾತ್ರಿ 9 ಗಂಟೆ ತನಕ ಕಾರ್ಯಾಚರಣೆ ಮಾಡಲಿವೆ ಎಂದು ಕೆ.ಎಸ್.ಆರ್.ಟಿ.ಸಿ. ಪ್ರಕಟಣೆ ತಿಳಿಸಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಜಾರಿಗೊಳಿಸಿದ್ದು, ಈ ಅವಧಿ ಹೊರತುಪಡಿಸಿ ಉಳಿದ ಅವಧಿಯಲ್ಲಿ ಬಸ್ ಗಳು ಸಂಚರಿಸಲಿವೆ. 

ಉಳಿದಂತೆ ಆಟೋ, ಮ್ಯಾಕ್ಸಿ ಕ್ಯಾಬ್, ಅಂಗಡಿ ಮುಂಗಟ್ಟುಗಳು ರಾತ್ರಿ ಗರಿಷ್ಠ 8.30ರ ವರೆಗೆ ತೆರೆದಿರಲಿವೆ. ಊಟ ಪಾರ್ಸೆಲ್ ನೀಡುವ ಹೋಟೆಲ್ ಗಳಿಗೂ ಸಹ ಇದು ಅನ್ವಯವಾಗಲಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಲಾಕ್ ಡೌನ್ 5.0 ಮಾರ್ಗ ಸೂಚಿಯಂತೆ ಕರ್ಪ್ಯೂ ಅವಧಿ ಕಡಿತಗೊಳಿಸಿದ್ದರಿಂದ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಗಳ ಸಂಚಾರದ ಸಮಯದಲ್ಲೂ ಬದಲಾವಣೆಗೊಂಡಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಕೆ ಎಸ್ ಆರ್ ಟಿ ಸಿ,  ಇಂದು ಕೆ ಎಸ್ ಆರ್ ಟಿ ಸಿ ವ್ಯಾಪ್ತಿಯಲ್ಲಿ ರಾತ್ರಿ 9 ಗಂಟೆಯವರೆಗೆ ಬಸ್ಸುಗಳ ಕಾರ್ಯಚರಣೆ ಇರುತ್ತದೆ. ನಾಳೆಯಿಂದ ಕೆ‌ಎಸ್ ಆರ್ ಟಿ‌ಸಿ ವ್ಯಾಪ್ತಿಯಲ್ಲಿ ಬೆಳಗ್ಗೆ 5ರಿಂದ ರಾತ್ರಿ 9 ಗಂಟೆಯವರೆಗೆ ಬಸ್ಸುಗಳ‌ ಕಾರ್ಯಾಚರಣೆ ಇರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

SCROLL FOR NEXT