ಸಂಗ್ರಹ ಚಿತ್ರ 
ರಾಜ್ಯ

ಕುಂದಾಪುರ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಯತ್ನ, ಪಶ್ಚಿಮ ಬಂಗಾಳ ಮೂಲದ ವ್ಯಕ್ತಿ ಸೆರೆ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯನ್ನು ಕುಂದಾಪುರ ಪೋಲೀಸರು ಬಂಧಿಸಿದ್ದಾರೆ. 

ಕುಂದಾಪುರ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯನ್ನು ಕುಂದಾಪುರ ಪೋಲೀಸರು ಬಂಧಿಸಿದ್ದಾರೆ. 

ಕೃತ್ಯವನ್ನು ಸಾರ್ವಜನಿಕರು ಪತ್ತೆ ಮಾಡಿ ಆರೋಪಿಯನ್ನು ಹಿಡಿದು ಥಳಿಸಿ ಬಳಿಕ ಪೋಲಿಸರಿಗೆ ಒಪ್ಪಿಸಿದ್ದಾರೆ. ಬಂಧಿತನನ್ನು ಬಿಸ್ವಾಸ್ (35) ಎಂದು ಗುರುತಿಸಲಾಗಿದೆ.

ಕುಂದಾಪುರದ ಚಿಕನ್ಸಾಲ್ ರಸ್ತೆಯಲ್ಲಿ ಬಾಲಕಿ ತನ್ನ ಕುಟುಂಬದೊಡನೆ ಬಾಡಿಗೆ ಮನೆಯಲ್ಲಿ ವಾಸವಿದ್ದಳು, ಆಕೆಯ ತಂದೆ ಹಾಗೂ ಆರೋಪಿ ಬಿಸ್ವಾಸ್ ಕಳೆದ 11 ವರ್ಷಗಳಿಂದ ಸ್ನೇಹಿತರಾಗಿದ್ದರು ಎನ್ನಲಾಗಿದೆ.

ಜೂನ್ 1 ರ ಸೋಮವಾರ ಬೆಳಿಗ್ಗೆ, ಬಾಲಕಿ ಒಂಟಿಯಾಗಿದ್ದ ವೇಳೆ ಅವಕಾಶವನ್ನು ಬಳಸಿಕೊಂಡು, ಬಿಸ್ವಾಸ್ ಮನೆಯ ಪಕ್ಕದ ಮರದ ಮೇಲೆ ಹತ್ತಿ ಮನೆಯ ಕೆಲ ಹೆಂಚುಗಳನ್ನು ತೆಗೆದು  ಮನೆಯೊಳಗೆ ಪ್ರವೇಶಿಸಿದ್ದಾನೆ. ಅವನು ಬಾಲಕಿಯನ್ನು ಅತ್ಯಾಚಾರ ಮಾಡಲು ಪ್ರಯತ್ನಿಸಿದಾಗ ಅವಳು ಕೂಗಿಕೊಂಡಿದ್ದಾಳೆ. 

ಬಾಲಕಿಯ ಕೂಗು ಕೇಳಿದ ಸ್ಥಳೀಯರು  ಸ್ಥಳಕ್ಕೆ ಧಾವಿಸಿ, ಬಿಸ್ವಾಸ್ ನನ್ನು ಥಳಿಸಿ ಪೋಲೀಸರಿಗೆ ಒಪ್ಪಿಸಿದ್ದಾರೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೊಕ್ಸೊ) ವಿವಿಧ ವಿಭಾಗಗಳ ಅಡಿಯಲ್ಲಿ ಕುಂದಾಪುರ ಪೊಲೀಸರು ಬಿಸ್ವಾಸ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT