ರಾಜ್ಯ

ಕೊರೋನಾ ಮಹಾಮಾರಿ: ಬೆಂಗಳೂರನ್ನು ಹಿಂದಿಕ್ಕಿ ಮೊದಲು, ಎರಡನೇ ಸ್ಥಾನಕ್ಕೇರಿದ ಉಡುಪಿ, ಕಲಬುರಗಿ!

Vishwanath S

ಬೆಂಗಳೂರು: ರಾಜ್ಯದಲ್ಲಿ ಅತಿ ಹೆಚ್ಚು ಕೊರೋನಾ ಸೋಂಕಿತರನ್ನು ಹೊಂದಿದ್ದ ಬೆಂಗಳೂರು ನಗರವನ್ನು ಈಗ ಉಡುಪಿ ಮತ್ತು ಕಲಬುರಗಿ ಜಿಲ್ಲೆಗಳು ಹಿಂದಿಕ್ಕಿವೆ.

ಉಡುಪಿಯಲ್ಲಿ ಒಂದೇ ದಿನ 150 ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ 100 ಪ್ರಕರಣಗಳು ವರದಿಯಾಗಿವೆ. ಇದರಿಂದ ಈ ಎರಡು ಜಿಲ್ಲೆಗಳಲ್ಲಿ ಕ್ರಮವಾಗಿ 410 ಹಾಗೂ 405 ಸೋಂಕಿತರೊಂದಿಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನದಲ್ಲಿವೆ. ಬೆಂಗಳೂರು ನಗರ 397 ಪ್ರಕರಣಗಳೊಂದಿಗೆ ಮೂರನೇ ಸ್ಥಾನಕ್ಕೆ ಕುಸಿದಿದೆ. 289 ಸೋಂಕಿತರೊಂದಿಗೆ ಮಂಡ್ಯ 5ನೇ ಸ್ಥಾನದಲ್ಲಿದೆ.

ಮಹಾರಾಷ್ಟ್ರದಿಂದ  ಹೆಚ್ಚಿನ ಸಂಖ್ಯೆಯಲ್ಲಿ ವಲಸಿಗ ಕಾರ್ಮಿಕರು ಆಗಮಿಸಿರುವುದರಿಂದ ಉಡುಪಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ.

ಕರ್ನಾಟಕದಲ್ಲಿ ಒಟ್ಟು 3,796 ಪ್ರಕರಣಗಳ ಪೈಕಿ 1403 ಮಂದಿ ಗುಣಮುಖರಾಗಿದ್ದಾರೆ. ಇನ್ನು 2339 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ರಾಜ್ಯದಲ್ಲಿ ಒಟ್ಟಾರೆ 52 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. 

SCROLL FOR NEXT