ರಾಜ್ಯ

ಬೆಂಗಳೂರು: 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

Lingaraj Badiger

ಬೆಂಗಳೂರು: ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ನೆಲಮಂಗಲ ತಾಲೂಕಿನ ಚಂದನಹೊಸಹಳ್ಳಿ ಲೇಔಟ್ ನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ‌ ಬಾಲಕಿಯನ್ನು 13 ವರ್ಷದ ಐಶ್ವರ್ಯ ಎಂದು ಗುರುತಿಸಲಾಗಿದೆ.

ಐಶ್ವರ್ಯ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಮನೆಯಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾಳೆ.

ವಿದ್ಯಾರ್ಥಿನಿ ಯಾವ ಕಾರಣಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂಬ ಬಗ್ಗೆ ನಿಖರ ಮಾಹಿತಿಯಿಲ್ಲ.

ಈ ಸಂಬಂಧ ಡಾಬಸ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

SCROLL FOR NEXT