ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷಾ ಕೇಂದ್ರಗಳು, ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿ ರಿಲೀಸ್
ಜೂನ್ 18 ರಂದು ನಡೆಯುವ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಮತ್ತು ಅವರ ಪರೀಕ್ಷಾ ಕೇಂದ್ರದ ವಿವರವುಳ್ಳ ತಾತ್ಕಾಲಿಕ ಪಟ್ಟಿ ಬಿಡುಗಡೆಯಾಗಿದೆ.
ಬೆಂಗಳೂರು: ಜೂನ್ 18 ರಂದು ನಡೆಯುವ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಮತ್ತು ಅವರ ಪರೀಕ್ಷಾ ಕೇಂದ್ರದ ವಿವರವುಳ್ಳ ತಾತ್ಕಾಲಿಕ ಪಟ್ಟಿ ಬಿಡುಗಡೆಯಾಗಿದೆ.
ವಿದ್ಯಾರ್ಥಿಗಳು ಇರುವ ಜಿಲ್ಲೆಯಲ್ಲೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿರುವ ಇಲಾಖೆ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿ ರಿಲೀಸ್ ಮಾಡಿದೆ.
ಸಂಬಂಧ ಪಟ್ಟ ಕಾಲೇಜುಗಳ ಪ್ರಾಚಾರ್ಯರ ಮೂಲಕ ತಿದ್ದುಪಡಿಗೆ ಜೂನ್ 5ರವೆರೆಗೆ ಅವಕಾಶ ಕಲ್ಪಿಸಲಾಗಿದೆ. ಜೂನ್ 7 ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುವುದು. www,pue.kar.nic.in ವೆಬ್ ಸೈಟ್ ನಲ್ಲಿ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಂಡು ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಹೋಗಬಹುದಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.