ಬಿಡಿಎ ಆಯುಕ್ತ ಡಾ. ಜಿ.ಸಿ. ಪ್ರಕಾಶ್ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಿಸಿ ಪ್ರಕಾಶ್ ಅವರನ್ನು ಮೈಸೂರು ಪ್ರಾದೇಶಿಕ ಆಯುಕ್ತರನ್ನಾಗಿ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ. ಜಿಸಿ ಪ್ರಕಾಶ್ ಅವರನ್ನು ಮೈಸೂರು ಕೊರೋನಾ ಮೇಲ್ವಿಚಾರಣೆ ಮಾಡುವ ವಿಶೇಷ ಅಧಿಕಾರಿಯನ್ನಾಗಿಯೂ ಸಹ ನೇಮಕ ಮಾಡಲಾಗಿದೆ.
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಜಿ.ಸಿ. ಪ್ರಕಾಶ್ ಅವರನ್ನು ಮೈಸೂರು ಪ್ರಾದೇಶಿಕ ಆಯುಕ್ತರನ್ನಾಗಿ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ. ಜಿಸಿ ಪ್ರಕಾಶ್ ಅವರನ್ನು ಮೈಸೂರು ಕೊರೋನಾ ಮೇಲ್ವಿಚಾರಣೆ ಮಾಡುವ ವಿಶೇಷ ಅಧಿಕಾರಿಯನ್ನಾಗಿಯೂ ಸಹ ನೇಮಕ ಮಾಡಲಾಗಿದೆ.
ಬೀದರ್ ಜಿಲ್ಲಾಧಿಕಾರಿ ಡಾ. ಎಚ್ ಆರ್ ಮಹಾದೇವ್ ಅವರನ್ನು ಪ್ರಕಾಶ್ ಅವರ ಸ್ಥಾನಕ್ಕೆ ಅಂದರೆ ಬಿಡಿಎ ಆಯುಕ್ತರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ರಾಷ್ಟ್ರೀಯ ಆರೋಗ್ಯ ಮಿಷನ್ ನ ನಿರ್ದೇಶಕರಾಗಿದ್ದ ರಾಮಚಂದ್ರ ಆರ್ ಅವರನ್ನು ಬೀದರ್ ಜಿಲ್ಲಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.
ಭಾರತೀಯ ಆರೋಗ್ಯ ಮಿಷನ್ ನ ನಿರ್ದೇಶಕಿಯಾಗಿ ಅರುಂದತಿ ಚಂದ್ರಶೇಖರ್ ಅವರನ್ನು ನೇಮಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.