ರಾಜ್ಯ

ಕರ್ನಾಟಕದಲ್ಲಿ ಮತ್ತೊಂದು 'ಪ್ಲಾಸ್ಮಾ ಥೆರಪಿ’ ಚಿಕಿತ್ಸೆ ಯಶಸ್ವಿ!

Raghavendra Adiga

ಬೆಂಗಳೂರು: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದ್ದ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಯಶಸ್ವಿಯಾಗಿದ್ದ ಬೆನ್ನಲ್ಲೇ ಬೆಂಗಳೂರು ಆಸ್ಪತ್ರೆಯಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಪಡೆದ ಕೊರೋನಾ ರೋಗಿಯೊಬ್ಬ ಗುಣಮುಖರಾಗಿದ್ದಾರೆ. ಇದರಿಂದಾಗಿ ಕರ್ನಾಟಕದಲ್ಲಿ ಎರಡನೇ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಯಶಸ್ವಿಯಾದಂತಾಗಿದೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ರೋಗಿ ಇದೀಗ ಚೇತರಿಸಿಕೊಂಡಿದ್ದು ಅವರನ್ನು ಆಸ್ಪತ್ರೆಯ ಸಾಮಾನ್ಯ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.

ಮೇ. 25 ರಂದು ಕೊರೋನಾ ಕಾರಣಕ್ಕೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಮಧ್ಯ ವಯಸ್ಕ ವ್ಯಕ್ತಿಗೆ  ಮೇ.27ರಂದು ಫ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲಾಗಿತ್ತು ಎಂದು ಆಸ್ಪತ್ರೆಯ ಡಾ. ವಿಶಾಲ್ ರಾವ್ ಹೇಳಿದ್ದಾರೆ

ರೋಗಿಗೆ ಡಯಾಬಿಟಿಸ್ ಸಹ ಇದ್ದು ಅವರು ಶೀಘ್ರದಲ್ಲೇ ಚೇತರಿಸಿಕೊಂಡ ನಂತರ ಕನಿಷ್ಠ ಆಕ್ಸಿಜನ್ ಸಪೋರ್ಟ್​ನಲ್ ನಲ್ಲಿ ಇಡಲಾಗಿದೆ. ಇನ್ನು ಸಂಪೂರ್ಣ ಗುಣಮುಖವಾದ ನಂತರ ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ.

SCROLL FOR NEXT