ಸಾಂದರ್ಭಿಕ ಚಿತ್ರ 
ರಾಜ್ಯ

ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಾಂಕವೇ ಫಿಕ್ಸ್ ಆಗಿಲ್ಲ, ಹೊಸ ಕಾರು ಖರೀದಿಗೆ ಮುಂದಾದ ಆಯೋಗ!

ಗ್ರಾಮ ಪಂಚಾಯಿತಿ ಚುನಾವಣೆ ಯಾವಾಗ ನಡೆಯಲಿದೆ ಎಂಬುದರ ಬಗ್ಗೆ ಸರ್ಕಾರಕ್ಕೆ ಇನ್ನೂ ಸರಿಯಾದ ಮಾಹಿತಿಯಿಲ್ಲ, ಹೀಗಿರುವಾಗಲೇ  ಚುನಾವಣಾ ಆಯೋಗದ ಬಳಕೆಗಾಗಿ  ಹೈಎಂಡ್ ಮಲ್ಟಿ- ಯುಟಿಲಿಟಿ ವಾಹನ ಖರೀದಿಗೆ ಮುಂದಾಗಿದೆ

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ಯಾವಾಗ ನಡೆಯಲಿದೆ ಎಂಬುದರ ಬಗ್ಗೆ ಸರ್ಕಾರಕ್ಕೆ ಇನ್ನೂ ಸರಿಯಾದ ಮಾಹಿತಿಯಿಲ್ಲ, ಹೀಗಿರುವಾಗಲೇ  ಚುನಾವಣಾ ಆಯೋಗದ ಬಳಕೆಗಾಗಿ  ಹೈಎಂಡ್ ಮಲ್ಟಿ- ಯುಟಿಲಿಟಿ ವಾಹನ ಖರೀದಿಗೆ ಮುಂದಾಗಿದೆ.ಕೊರೋನಾದಿಂದಾಗಿ ರಾಜ್ಯದಲ್ಲಿ ಆರ್ಥಿಕ ಸಮಸ್ಯೆ ತಲೆದೋರಿದ್ದು,ಇಂತಹ ಪರಿಸ್ಥಿತಿಯಲ್ಲಿ ಹೊಸ ಕಾರು
ಖರೀದಿಗೆ ಮುಂದಾಗಿರುವುದು ಚರ್ಚೆಗೆ ಕಾರಣವಾಗಿದೆ.

ಒಟ್ಟು 6,025 ಗ್ರಾಮ ಪಂಚಾಯಿತಿಗಳ ಪೈಕಿ   5,800 ಪಂಚಾಯಿತಿಗಳ ಅಧಿಕಾರ ಅವಧಿ ಜೂನ್ ತಿಂಗಳಲ್ಲಿ ಮುಗಿಯಲಿದೆ. ನಿಯಮದ ಪ್ರಕಾರ ಅಧಿಕಾರವದಿ ಕೊನೆಗೊಳ್ಳುವ ಮುನ್ನವೇ ಚುನಾವಣೆ ನಡೆಸಬೇಕು, ಆದರೆ ಕೊರೋನಾ ಹಿನ್ನೆಲೆಯಲ್ಲಿ ವಿನಾಯಿತಿ ನೀಡಲು ಬರುತ್ತದೆ. ಹೀಗಾಗಿ ರಾಜ್ಯ ಚುನಾವಣಾ ಆಯೋಗ ಇನ್ನೂ ದಿನಾಂಕ ನಿಗದಿ ಮಾಡಿಲ್ಲ.

ಕಳೆದ ವರ್ಷದ ಜುಲೈ ನಲ್ಲಿ ಟಾಟಾ ಇಂಡಿಗೋ ಕಾರು ಹರಾಜು ಹಾಕಿದ್ದ ಚುನಾವಣಾ ಆಯೋಗ ಟಯೋಟಾ ಇನ್ನೋವಾ ಕ್ರಿಸ್ಟಾ ಕಾರಿಗಾಗಿ ಸರ್ಕಾರಕ್ಕೆ ಮನವಿ ಮಾಡಿತ್ತು.   ಹೀಗಾಗಿ 2020 ಮತ್ತು 2021 ರ  ಗ್ರಾಮ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗಾಗಿ ಚುನಾವಣಾ ಆಯೋಗ ರಾಜ್ಯಾದ್ಯಂತ ಸಂಚರಿಸುವ ಅವಶ್ಯಕತೆಯಿದೆ.

ರಾಜ್ಯ ಚುನಾವಣಾ ಆಯೋಗವು 78 ಲಕ್ಷ ರೂ.ಗಳ ಅನುದಾನವನ್ನು ಹೊಂದಿದ್ದು, 2019 ರ ನವೆಂಬರ್‌ನಲ್ಲಿ ಲಭ್ಯವಿರುವ ನಿಧಿಯಿಂದ 14 ಲಕ್ಷ ರೂ.ಗಳ ವೆಚ್ಚದಲ್ಲಿ ಟೊಯೋಟಾ ಕೊರೊಲಾ ಕಾರು ಖರೀದಿಸಲು ಹಣಕಾಸು ಇಲಾಖೆ ಅನುಮೋದನೆ ನೀಡಿದೆ.

ರಾಜ್ಯ ಚುನಾವಣಾ ಆಯುಕ್ತರ ಹುದ್ದೆಯು ಹೈಕೋರ್ಟ್ ನ್ಯಾಯಾಧೀಶರ ಹುದ್ದೆಗೆ ಸಮನಾಗಿರುತ್ತದೆ, ಹೀಗಾಗಿ ಸೌಲಭ್ಯಗಳನ್ನು ಸಮನಾಗಿ ಒದಗಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗ ಹೇಳಿತ್ತು. ಜತೆಗೆ ಟೊಯೋಟಾ ಇನ್ನೋವಾ ಕ್ರಿಸ್ಟಾ ಕಾರು ಖರೀದಿಸಬೇಕೆಂದು ತಿಳಿಸಿತ್ತು.

ಜೂನ್ 1 2020 ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 22 ಲಕ್ಷಕ್ಕೂ ಅಧಿಕ ಮೌಲ್ಯದ ವಾಹನ ಖರೀದಿಗೆ ಅನುಮೋದನೆ ನೀಡಿದೆ. ನಾವು ಹಲವು ವರ್ಷಗಳಿಂದ ಹಳೇಯ ಕಾರು ಉಪಯೋಗಿಸುತ್ತಿದ್ದೆವು, ರಾಜ್ಯದ್ಯಂತ ಸಂಚಾರ ಮಾಡುವ ಅಗತ್ಯವಿರುವ ಕಾರಣ ನಮಗೆ ಹೊಸ ಕಾರಿನ ಅವಶ್ಯಕತೆಯಿದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಬಿ. ಬಸವರಾಜ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT