ಬೆಂಗಳೂರು: ನಡು ರಸ್ತೆಯಲ್ಲೇ ಹೊತ್ತಿ ಉರಿದ ಐಶಾರಾಮಿ ಕಾರು, ಮಾಲೀಕ ಪಾರು
ಶಾರ್ಟ್ ಸರ್ಕ್ಯೂಟ್ನಿಂದಾಗಿ ಐಶಾರಾಮಿ ಕಾರೊಂದು ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದಿರುವ ಘಟನೆ ನಗರದ ಕಸ್ತೂರಬಾ ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದೆ.
ಬೆಂಗಳೂರು: ಶಾರ್ಟ್ ಸರ್ಕ್ಯೂಟ್ನಿಂದಾಗಿ ಐಶಾರಾಮಿ ಕಾರೊಂದು ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದಿರುವ ಘಟನೆ ನಗರದ ಕಸ್ತೂರಬಾ ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದೆ.
ಬೆಳಗ್ಗೆ 5 ಗಂಟೆಗೆ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸಮಯ ಪ್ರಜ್ಞೆಯಿಂದ ಬೆಂಜ್ ಕಾರು ಮಾಲೀಕ ಥಾಮಸ್ ಹೊರಗೆ ಬಂದಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಇದು ಟ್ರಯಾಂಗಲ್ ಪ್ರಾಪರ್ಟಿ ಡೆವಲಪ್‌ಮೆಂಟ್ ಎಂಬ ಸಂಸ್ಥೆಗೆ ಸೇರಿದ ಕಾರು ಇದಾಗಿದೆ ಎಂದು ಗುರುತಿಸಲಾಗಿದೆ.
ವಿಷಯ ತಿಳಿಯುತ್ತದ್ದಂತೆ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.