ಸಾಂದರ್ಭಿಕ ಚಿತ್ರ 
ರಾಜ್ಯ

ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯ ಸರ್ಕಾರ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಆದೇಶ ಹೊರಡಿಸಿದೆ. ಕಾರ್ಮಿಕ ಇಲಾಖೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ರಾಜ್ ಕುಮಾರ್ ಖಟ್ರಿ ಕೃಷಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಆದೇಶ ಹೊರಡಿಸಿದೆ. ಕಾರ್ಮಿಕ ಇಲಾಖೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ರಾಜ್ ಕುಮಾರ್ ಖಟ್ರಿ ಕೃಷಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಗಂಗಾ ರಾಮ್ ಬದರಿಯಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಮತ್ತು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಕಂದಾಯ ಇಲಾಖೆಯ (ವಿಪತ್ತು ನಿರ್ವಹಣೆ, ಭೂಮಿ ಮತ್ತು ಯುಪಿಒಆರ್ )ನ ಪ್ರಧಾನ ಕಾರ್ಯದರ್ಶಿಯಾಗಿ ಎನ್ ಮಂಜುನಾಥ್ ಪ್ರಸಾದ್ ಅಧಿಕಾರ ವಹಿಸಿಕೊಂಡರೆ, ಪ್ರವಾಸೋದ್ಯಮ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಟಿ ಕೆ ಅನಿಲ್ ಕುಮಾರ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಹಿಂದುಳಿದ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ಮೊಹಮ್ಮದ್ ಮೊಹ್ಸಿನ್ ಕರ್ನಾಟಕ ಸರ್ಕಾರದ ಪುನರ್ವಸತಿ ಇಲಾಖೆಯ ಆಯುಕ್ತ ಮತ್ತು ಕಾರ್ಯದರ್ಶಿ ಹುದ್ದೆ ವಹಿಸಿಕೊಳ್ಳಲಿದ್ದಾರೆ. ಕೃಷಿ ಇಲಾಖೆಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ತೋಟಗಾರಿಕಾ ಮತ್ತು ರೇಷ್ಮೆ ಇಲಾಖೆಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel