ರಾಜ್ಯ

ಯುದ್ಧ ಗೆದ್ದು ಬಂದವರಂತೆ ಮೆರವಣಿಗೆ ಮಾಡಿದ್ದು ಸರಿಯಲ್ಲ: ಇಮ್ರಾನ್ ಪಾಷಾ ವಿರುದ್ಧ ಜಮೀರ್ ಗರಂ!

Srinivasamurthy VN

ಬೆಂಗಳೂರು: ಕೊರೋನಾ ವೈರಸ್ ಸೋಂಕಿನಿಂದ ಗುಣಮುಖರಾದ ಪಾದರಾಯನಪುರ ಕಾರ್ಪೋರೇಟರ್ ಇಮ್ರಾನ್ ಪಾಷಾ ವಿರುದ್ಧ ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಗರಂ ಆಗಿದ್ದಾರೆ.

ಹೌದು.. ಕೋವಿಡ್ 19 ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಾದರಾಯನಪುರದ ಕಾರ್ಪೊರೇಟರ್ ಇಮ್ರಾನ್ ಪಾಷಾ ಇಂದು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆದರೆ ವೈರಸ್ ನಿಂದ ಗುಣಮುಖರಾದ ಖುಷಿಯಲ್ಲೇ ಇಮ್ರಾನ್ ಪಾಷಾ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದು, ಆಸ್ಪತ್ರೆಯಿಂದ ಮನೆಗೆ ನೂರಾರು ಜನರೊಂದಿಗೆ ಮೆರವಣಿಗೆಯಲ್ಲಿ ತೆರಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. 

ಇದೇ ವಿಚಾರವಾಗಿ ಶಾಸಕ ಜಮೀರ್ ಅಹ್ಮದ್ ಖಾನ್ ಅವರೂ ಕೂಡ ಇಮ್ರಾನ್ ಪಾಷಾ ವಿರುದ್ಧ ಗರಂ ಆಗಿದ್ದು, ಈ ಬಗ್ಗೆ ಟ್ವೀಟ್ ಮಾಡಿರುವ ಜಮೀರ್, 'ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾ ಕೊರೊನಾ ಇಂದ ಗುಣಮುಖರಾಗಿ ಬಂದಿದ್ದು ನನಗೂ ಸಂತೋಷವಾಗಿತ್ತು, ಆದರೆ ಈ ರೀತಿ ಯುದ್ಧ ಗೆದ್ದು ಬಂದವರಂತೆ ಮೆರವಣಿಗೆ ಮೂಲಕ ಬಂದಿದ್ದನ್ನು ನಾನು ಖಂಡಿಸುತ್ತೇನೆ. ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿ. ರಾಜ್ಯಕ್ಕೆ ರಾಜ್ಯವೇ ಕೊರೊನಾ ಇಂದ ಕಂಗಾಲಾಗಿದೆ, ಇಂತಹ ಸಂದಿಗ್ಧ ಸಮಯದಲ್ಲಿ ಜನರನ್ನು ಗುಂಪುಗೂಡಿಸಿ ಮೆರವಣಿಗೆ ಮಾಡುವುದು ಬೇಜವಾಬ್ದಾರಿಯ ನಡವಳಿಕೆಯಾಗುತ್ತದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜನರಿಗೆ ತಿಳಿಹೇಳಬೇಕಾದವರೆ ಈ ರೀತಿ ವರ್ತಿಸಿದರೆ ಹೇಗೆ? ಎಂದು ಕಿಡಿಕಾರಿದ್ದಾರೆ. 

SCROLL FOR NEXT