ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್-19: ಶಿವಮೊಗ್ಗದಲ್ಲಿ 10,000 ಜನರ ಸ್ಯಾಂಪಲ್ಸ್ ಪರೀಕ್ಷೆ

ಶಿವಮೊಗ್ಗ ಜಿಲ್ಲೆಯಲ್ಲಿ ಈ ವರೆಗೂ 10,000 ಜನರಕ್ಕೂ ಹೆಚ್ಚು ಜನರ ಸ್ಯಾಂಪಲ್ಸ್ ಸಂಗ್ರಹಿಸಲಾಗಿದ್ದು, ಪರೀಕ್ಷೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.  

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಈ ವರೆಗೂ 10,000 ಜನರಕ್ಕೂ ಹೆಚ್ಚು ಜನರ ಸ್ಯಾಂಪಲ್ಸ್ ಸಂಗ್ರಹಿಸಲಾಗಿದ್ದು, ಪರೀಕ್ಷೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.  

ಹೊರ ಭಾಗಗಳಿಂದ ಬರುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ಪರೀಕ್ಷಾ ಪ್ರಯೋಗಾಲಯಗಳನ್ನೂ ಹೆಚ್ಚಳ ಮಾಡಲಾಗಿದ್ದು, ಈ ವರೆಗೂ 65 ಮಂದಿಯಲ್ಲಿ ವೈವರಸ್ ದೃಢಪಟ್ಟಿದೆ ಎಂದು ವರದಿಗಳು ತಿಳಿಸಿವೆ. 

ಮೇ.10ರಂದು ಜಿಲ್ಲೆಯಲ್ಲಿ ಮೊದಲ ವೈರಸ್ ಪತ್ತೆಯಾಗಿತ್ತು. ಗುಜರಾತ್ ರಾಜ್ಯದ ಅಹಮದಾಬಾದ್ ನಿಂದ ಜಿಲ್ಲೆಗೆ ಬಂದಿದ್ದ 8 ಮಂದಿಯಲ್ಲಿ ವೈರಸ್ ಪತ್ತೆಯಾಗಿತ್ತು. ಇದರೊಂದಿಗೆ ಸೋಂಕುತರ ಸಂಖ್ಯೆ 65ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರ, ತಮಿಳುನಾಡು, ದೆಹಲಿ ಮತ್ತು ದೇಶದ ಇದರೆ ಭಾಗಗಳಿಂಗ ಬರುತ್ತಿರುವ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಹೇಳಲಾಗುತ್ತಿದೆ. 

ಜಿಲ್ಲಾ ಸರ್ಜನ್ ಡಾ.ರಘುನಂದನ್ ಅವರು ಮಾತನಾಡಿ, ಮಹಾರಾಷ್ಟ್ರದಿಂದ ಬರುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಪರೀಕ್ಷೆಗಳನ್ನೂ ಹೆಚ್ಚಾಗಿ ನಡೆಸಲಾಗುತ್ತಿದೆ. ಕಂಟೈನ್ಮೆಂಟ್ ಝೋನ್ ನಲ್ಲಿರುವ ಬಹುತೇಕ ಮಂದಿಯನ್ನೂ ಪರೀಕ್ಷೆಗೊಳಪಡಿಸಲಾಗುತ್ತಿದೆ. ಸಾರಿ ಹಾಗೂ ಐಎಲ್ಐ ಲಕ್ಷಣಗಳಿರುವವರನ್ನು ಜನರನ್ನು ಪತ್ತೆ ಹಚ್ಚಲು ಸುಲಭವಾಗುತ್ತಿದೆ. ಕ್ಯಾಸನೂರ್ ಫಾರೆಸ್ಟ್ ಡಿಸೀಸ್ ಡಯಾಗ್ನೋಸ್ಟಿಕ್ ಆ್ಯಂಡ್ ರಿಸರ್ಚ್ ಲ್ಯಾಬೋರೇಟರಿ ಸಹಾಯ ಮಾಡುತ್ತಿದ್ದು, ಪ್ರಯೋಗಾಲಯದಲ್ಲಿ ಈ ವರೆಗೂ 700 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT