ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ 
ರಾಜ್ಯ

ಮೂರ್ನಾಲ್ಕು ದಿನಗಳ ಬಳಿಕ ಅಂತರ್ ರಾಜ್ಯ ಬಸ್ ಸೇವೆ ಪುನರ್ ಆರಂಭ: ಲಕ್ಷ್ಮಣ್ ಸವದಿ

ಮೂರ್ನಾಲ್ಕು ದಿನಗಳ ಬಳಿಕ ಅಂತರ್ ರಾಜ್ಯ ಬಸ್ ಸೇವೆಯನ್ನು ಪುನರ್ ಆರಂಭಿಸಲಾಗುವುದು ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಕಲಬುರಗಿ: ಮೂರ್ನಾಲ್ಕು ದಿನಗಳ ಬಳಿಕ ಅಂತರ್ ರಾಜ್ಯ ಬಸ್ ಸೇವೆಯನ್ನು ಪುನರ್ ಆರಂಭಿಸಲಾಗುವುದು ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಮಹಾರಾಷ್ಟ್ರ ಹೊರತುಪಡಿಸಿ ಉಳಿದ ಎಲ್ಲ ರಾಜ್ಯಗಳಿಗೂ ಬಸ್ ಸಂಚಾರ ಆರಂಭಿಸಲು ಚಿಂತನೆ ನಡೆದಿದೆ. ಈಗಾಗಲೇ ಆಂಧ್ರಪ್ರದೇಶ, ತೆಲಂಗಾಣ , ಗೋವಾ ಮತ್ತಿತರ ರಾಜ್ಯಗಳಿಗೆ ಪತ್ರ ಬರೆಯಾಗಿದೆ, ಅಲ್ಲಿಂದ ಒಪ್ಪಿಗೆ ಬಂದರೆ ಸಂಚಾರ ಆರಂಭಿಸಲಾಗುವುದು ಎಂದು ತಿಳಿಸಿದರು.

ರಾಜ್ಯದೊಳಗೆ ಹವಾನಿಯಂತ್ರಿತ ಸ್ಲೀಪರ್ ಕೋಚ್ ಬಸ್ ಗಳ ಟಿಕೆಟ್ ಬುಕ್ಕಿಂಗ್ ಆರಂಭಿಸಲಾಗಿದೆ. ಹೊರ ರಾಜ್ಯ ಪ್ರವಾಸ ಮಾಡುವವರಿಂದ ಕೂಡಾ ಬೇಡಿಕೆ ಬರುತ್ತಿದೆ ಎಂದರು.

ಲಾಕ್ ಡೌನ್ ಕಾರಣ ಸಾರಿಗೆ ಇಲಾಖೆಗೆ 2,200 ಕೋಟಿ ನಷ್ಟ ಸಂಭವಿಸಿದೆ. ಇದನ್ನು ಸರಿದೂಗಿಸಲು ಬಸ್ ಪ್ರಯಾಣ ದರ ಏರಿಸುವುದಿಲ್ಲ, ಸಿಬ್ಬಂದಿ ಕಡಿತ, ರಜೆ ಮೇಲೆ ಕಳುಹಿಸುವ ಕ್ರಮ ಅನುಸರಿಸುವುದಿಲ್ಲ, ಬದಲಾಗಿ ಸೋರಿಕೆ ತಡೆ, ಕಾರ್ಯಕ್ಷಮತೆ ವೃದ್ಧಿ ಸೇರಿದಂತೆ ಇತರ ಪರ್ಯಾಯ ಮಾರ್ಗ ಕಂಡುಕೊಳ್ಳುತ್ತೇವೆ ಎಂದು ಹೇಳಿದರು. 

ಸದ್ಯಕ್ಕೆ 14 ಲಕ್ಷ ಪ್ರಯಾಣಿಕರು ಸರ್ಕಾರಿ ಬಸ್ ಗಳಲ್ಲಿ ಸಂಚರಿಸುತ್ತಿದ್ದಾರೆ. ಮುಂದಿನ ಮೂರು ತಿಂಗಳಲ್ಲಿ 4 ಸಾವಿರ ಹೊಸ ಬಸ್ ಗಳನ್ನು ಖರೀದಿಸಿ ಸಾರಿಗೆ ನಿಗಮಗಳಿಗೆ ನೀಡಲಾಗುವುದು ಎಂದು ತಿಳಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ