ಪ್ರವೀಣ್ ಸೂದ್ 
ರಾಜ್ಯ

ಪೊಲೀಸರ ಕ್ವಾರಂಟೈನ್ ಅವಧಿ, ಕರ್ತವ್ಯದ ಅವಧಿ ಎಂದು ಪರಿಗಣಿಸಿ: ಪ್ರವೀಣ್ ಸೂದ್ ಆದೇಶ

ಕೊರೊನಾ ಭೀತಿ ಹಿನ್ನೆಲೆಯಲ್ಲಿ ಇನ್ನು ಮುಂದೆ ಪೊಲೀಸರು ಕ್ವಾರಂಟೀನ್ ನಲ್ಲಿದ್ದರೆ ಅದು ಕರ್ತವ್ಯದ ಅವಧಿ ಎಂದು ಪರಿಗಣಿಸಬೇಕು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು:  ಕೊರೊನಾ ಭೀತಿ ಹಿನ್ನೆಲೆಯಲ್ಲಿ ಇನ್ನು ಮುಂದೆ ಪೊಲೀಸರು ಕ್ವಾರಂಟೀನ್ ನಲ್ಲಿದ್ದರೆ ಅದು ಕರ್ತವ್ಯದ ಅವಧಿ ಎಂದು ಪರಿಗಣಿಸಬೇಕು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.

ಕ್ವಾರಂಟೀನ್ ಸಮಯವನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಬೇಕು ಎಂದು ಡಿಜಿಪಿ ಹೇಳಿದ್ದು, ಈ ಸಿಹಿ ಸುದ್ದಿ ಹಿನ್ನಲೆಯಲ್ಲಿ ಸಿಬ್ಬಂದಿ ನಿರಾಳರಾಗಿದ್ದಾರೆ.

ರಾಜ್ಯದಲ್ಲಿ ವ್ಯಾಪಕವಾಗಿ ಕೊರೊನಾ ಸೋಂಕು ತನ್ನ ಜಾಲವನ್ನು ವ್ಯಾಪಕವಾಗಿ ವಿಸ್ತರಿಸುತ್ತಿದ್ದು, ದಿನಂಪ್ರತಿ ಸಾರ್ವಜನಿಕರ ಜೊತೆಗೆ ಪೊಲೀಸರು ನೇರ ಸಂಪರ್ಕದಲ್ಲಿರುತ್ತಾರೆ. ಹೀಗಾಗಿ ಇತ್ತೀಚೆಗೆ ಪೊಲೀಸರಲ್ಲೂ ಕೊರೊನಾ ಸೋಂಕು ಕಂಡು ಬರುತ್ತಿದ್ದು, ಸೋಂಕಿತರ ಜೊತೆ ಸಂಪರ್ಕ ಹೊಂದಿದ ಹಲವಾರು ಪೊಲೀಸರು ಕರ್ತವ್ಯ ನಿರ್ವಹಣೆ ಸಮಯದಲ್ಲಿ ಹೋಂ ಕ್ವಾರಂಟೈನ್ ಅಥವಾ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡುತ್ತಿದ್ದಾರೆ. ಹೀಗಾಗಿ ಕ್ವಾರಂಟೈನ್ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಬೇಕು ಎಂದು ಡಿಜಿಪಿ ಸೂಚಿಸಿದ್ದಾರೆ.

ಕೊರೋನಾ ಸೋಂಕಿತರ ಪ್ರಾಥಮಿಕ, ದ್ವಿತೀಯ ಸಂಪರ್ಕ ಹೊಂದಿದವರು ಹಾಗೂ ತರಬೇತಿ ನಿಮಿತ್ತ ಹೊರರಾಜ್ಯದಿಂದ ಪ್ರಯಾಣ ಬೆಳೆಸಿದ ಸಿಬ್ಬಂದಿಗೂ ಈ ನಿಯಮ ಅನ್ವಯವಾಗಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ವಿವಾದ: ಚುನಾವಣಾ ಆಯೋಗ, ಜ್ಞಾನೇಶ್ ಕುಮಾರ್​ಗೆ ಸುಪ್ರೀಂ ಕೋರ್ಟ್ ನೋಟಿಸ್; ರಾಹುಲ್ ಗಾಂಧಿಗೂ ತರಾಟೆ

ಸಂಶಯ ಬಂದ್ರೆ ಕುಮಾರಸ್ವಾಮಿಯನ್ನೂ ವಶಕ್ಕೆ ಪಡೆಯುತ್ತೇವೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಪ್ರಿಯಕರ? ಮನೆ ಮುಂದೆ ಯುವತಿ ಪ್ರತಿಭಟನೆ!-Video

'ಮೋದಿ ವಿರೋಧಿ ಪ್ರತಿಭಟನೆಗಳಿಗೆ ಅಮೆರಿಕನ್ನರ ಆರ್ಥಿಕ ನೆರವು?'; Mary Millben ಸ್ಫೋಟಕ ಆರೋಪ!

‘ಮೋದಿಗೆ ಅಮೆರಿಕ ಬೇಕಿಲ್ಲ, ಆದರೆ ಅಮೆರಿಕಕ್ಕೆ ಮೋದಿ ಬೇಕು'.. 'ನಿಮ್ಮನ್ನು ಬಳಸಿಕೊಂಡು ಕೈ ಬಿಡುತ್ತಾರೆ': ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಎಚ್ಚರಿಕೆ