ಬೆಂಗಳೂರು: ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ನ ರಾಜಧಾನಿ ಅಬುದಾಬಿಯಿಂದ ಬುಧವಾರ ರಾತ್ರಿ 07.15 ಗಂಟೆಗೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೂವತ್ತೊಂದನೇ ಏರ್ ಇಂಡಿಯಾ ವಿಮಾನದಲ್ಲಿ 179 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 179 ಮಂದಿ ಪ್ರಯಾಣಿಕರಲ್ಲಿ 07 ಮಕ್ಕಳು ಸೇರಿದಂತೆ 130 ಪುರುಷರು ಮತ್ತು 42 ಮಹಿಳೆಯರು ಇದ್ದಾರೆ. ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು 179 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿರುವುದಿಲ್ಲ.