ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) 
ರಾಜ್ಯ

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ರಾಜ್ಯದ 14 ಕಡೆ ಎಸಿಬಿ ದಾಳಿ

ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ರಾಜ್ಯದ ವಿವಿಧ 14 ಸ್ಥಳಗಳಲ್ಲಿ ಏಕ ಕಾಲಕ್ಕೆ ದಾಳಿ ನಡೆಸಿ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. 

ಬೆಂಗಳೂರು:  ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ರಾಜ್ಯದ ವಿವಿಧ 14 ಸ್ಥಳಗಳಲ್ಲಿ ಏಕ ಕಾಲಕ್ಕೆ ದಾಳಿ ನಡೆಸಿ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. 

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದಡಿ ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಎಲ್‌.ಸತೀಶ್‌ ಕುಮಾರ್‌ ಸೇರಿ ರಾಜ್ಯದ ನಾಲ್ವರು ಅಧಿಕಾರಿಗಳ ಮನೆ ಮತ್ತು ಕಚೇರಿ ಮೇಲೆ ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಎಲ್.ಸತೀಶ್ ಕುಮಾರ್ ಅವರ ಮೈಸೂರು ನಗರದ ಟಿ.ಕೆ.ಲೇಔಟ್ ನ ವಾಸದ ಮನೆ, ಬೆಂಗಳೂರಿನ ಡಾಲರ್ಸ್ ಕಾಲೋನಿಯ ಬಾಡಿಗೆ ಮನೆ, ಅವರು ಕರ್ತವ್ಯ ಕಾರ್ಯನಿರ್ವಹಿಸುತ್ತಿರುವ ಗಾಂಧಿನಗರದ ವಾಣಿಜ್ಯ ತೆರಿಗೆ ಕಚೇರಿ ಮೇಲೂ ದಾಳಿ ಮಾಡಲಾಗಿದೆ.

ಇನ್ನು, ಕೋಲಾರದ ಶ್ರೀನಿವಾಸ‍ಪುರ ವಲಯದ ವಲಯ ಅರಣ್ಯಾಧಿಕಾರಿ ಎನ್‌.ರಾಮಕೃಷ್ಣ ಅವರ ವಿಜಯನಗರದಲ್ಲಿನ ನಿವಾಸ, ಬೆಂಗಳೂರಿನ ವಾಸದ ಮನೆ ಹಾಗೂ ಕಾರ್ಯನಿರ್ವಹಿಸುತ್ತಿರುವ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿ‌ದ್ದಾರೆ.

 ರಾಯಚೂರು ಜಿಲ್ಲಾಧಿಕಾರಿಗಳ ಕಚೇರಿಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯನಿರ್ವಾಹಕ ಎಂಜಿನಿಯರ್‌ ಗೋಪಶೆಟ್ಟಿ ಮಲ್ಲಿಕಾರ್ಜುನ ಅವರ ಪತ್ನಿ ಹೆಸರಿನ ಪೆಟ್ರೋಲ್ ಬಂಕ್ ಹಾಗೂ ರಾಯಚೂರು-ಲಿಂಗಸೂರು ರಾಜ್ಯ ಹೆದ್ದಾರಿ-20ರಲ್ಲಿರುವ ನಾಗಭೂಷಣ್ ಟ್ರ್ಯಾಕ್ಟರ್ ಷೋ ರೂಂ ಮತ್ತು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ರಾಯಚೂರಿನ ಕಚೇರಿ ಮೇಲೆ ದಾಳಿ ಕೈಗೊಳ್ಳಲಾಗಿದೆ.

ಕೃಷ್ಣಭಾಗ್ಯ ಜಲ ನಿಗಮದ ಸಹಾಯಕ ಎಂಜಿನಿಯರ್‌ ರಾಘಪ್ಪ ಲಾಲಪ್ಪ ಲಮಾಣಿ ಅವರ ಬಾಗಲಕೋಟೆಯ ಮನೆ ಮತ್ತು ಕಚೇರಿಗಳಲ್ಲೂ ಎಸಿಬಿ ಶೋಧ ಕಾರ್ಯ ನಡೆಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!