ರಾಜ್ಯ

ಶಿಕ್ಷಣ, ಸಾಂಸ್ಕೃತಿಕ ಪರಂಪರೆಯ ರಕ್ಷಣೆಯಲ್ಲಿ ಬ್ರಾಹ್ಮಣ ಸಮುದಾಯದ ಕೊಡುಗೆ ಉಲ್ಲೇಖಾರ್ಹ: ಮುಖ್ಯಮಂತ್ರಿ ಯಡಿಯೂರಪ್ಪ

Raghavendra Adiga

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನೂತನ ಕಚೇರಿಯ ಲಾಂಛನ ಮತ್ತು ಜಾಲತಾಣವನ್ನು ಉದ್ಘಾಟನೆ ‌ಮಾಡಿದರು.

ಬಳಿಕ ಮಾತನಾಡಿದ ಅವರು, ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನೂತನ ಕಚೇರಿ, ಲಾಂಛನ ಹಾಗೂ ಜಾಲತಾಣವನ್ನು ಸಂತೋಷದಿಂದ ಉದ್ಘಾಟಿಸಿದ್ದೇನೆ. ಯಾವುದೇ ಒಂದು ಸಮುದಾಯವನ್ನು ಸಾರಾಸಗಟಾಗಿ ಮುಂದುವರೆದ ಸಮುದಾಯ ಎಂದು ಹೇಳಲು ಸಾಧ್ಯವಿಲ್ಲ. ಎಲ್ಲ ಸಮುದಾಯಗಳಲ್ಲೂ ಮುಂದುವರೆದವರು ಮತ್ತು ಹಿಂದುಳಿದವರು ಇರುತ್ತಾರೆ. ಅದೇ ರೀತಿ ಪಾರಂಪರಿಕವಾಗಿ ಬ್ರಾಹ್ಮಣ ಸಮುದಾಯವನ್ನು ಮುಂದುವರೆದ ಸಮುದಾಯ ಎಂದು ಗುರುತಿಸಿದ್ದರೂ, ಆರ್ಥಿಕವಾಗಿ ಅಶಕ್ತರಾಗಿರುವ ಹಲವಾರು ಮಂದಿ ಈ ಸಮುದಾಯದಲ್ಲಿದ್ದಾರೆ ಎಂದರು.

ಅಂತಹವರ ಅಭ್ಯುದಯಕ್ಕಾಗಿ ಬ್ರಾಹ್ಮಣರ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಾಯಿತು. ದೇಶದ ಇತಿಹಾಸದಲ್ಲಿ ಬ್ರಾಹ್ಮಣ ಸಮುದಾಯದವರ ಕೊಡುಗೆ ಉಲ್ಲೇಖಾರ್ಹವಾದುದು. ವಿಶೇಷವಾಗಿ ಶಿಕ್ಷಣ ಹಾಗೂ ಸಾಂಸ್ಕೃತಿಕ ಪರಂಪರೆಯ ರಕ್ಷಣೆಯಲ್ಲಿ ಈ ಸಮುದಾಯದ ಸಾಧನೆ ಅದ್ವಿತೀಯವಾದುದು. ಶಂಕರಾಚಾರ್ಯರು, ರಾಮಾನುಜಾಚಾರ್ಯರು, ಮಧ್ವಾಚಾರ್ಯರಂತಹ ಗುರುಶ್ರೇಷ್ಠರ ತತ್ವ ಹಾಗೂ ಆದರ್ಶಗಳ ಹಾದಿಯಲ್ಲಿ ನಡೆದು ಸಮಾಜ ಒಳಿತನ್ನು ಕಂಡಿದೆ. ವೇದೋಪನಿಷತ್ತುಗಳನ್ನು ಅಭ್ಯಸಿಸುವ ಮೂಲಕ ಆಧ್ಯಾತ್ಮಿಕತೆಯನ್ನು ಮನುಕುಲಕ್ಕೆ ವಿಪ್ರ ಸಮಾಜ ಭೋದಿಸುತ್ತಾ ಬಂದಿದೆ. ಬ್ರಾಹ್ಮಣ ಸಮುದಾಯವು ಸಾವಿರಾರು ವರ್ಷಗಳ ಇತಿಹಾಸ ಹಾಗೂ ಪರಂಪರೆಯನ್ನು ಹೊಂದಿದ್ದು, ರಾಷ್ಟ್ರ ನಿರ್ಮಾಣದಲ್ಲಿ ಅಪೂರ್ವ ಕೊಡುಗೆ ನೀಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

SCROLL FOR NEXT