ಸಾಂದರ್ಭಿಕ ಚಿತ್ರ 
ರಾಜ್ಯ

ವೃದ್ಧ ದಂಪತಿಯ ಹತ್ಯೆ: ಪುತ್ರನೇ ಕೊಲೆ ಮಾಡಿರುವ ಶಂಕೆ!

ನಗರದಲ್ಲಿ ವೃದ್ಧ ದಂಪತಿಯನ್ನು ಹತ್ಯೆ ಮಾಡಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕಾವೇರಿನಗರದ ಮಹದೇಶ್ವರ ದೇವಸ್ಥಾನದ ಬಳಿ ಘಟನೆ ನಡೆದಿದೆ. 

ಬೆಂಗಳೂರು: ನಗರದಲ್ಲಿ ವೃದ್ಧ ದಂಪತಿಯನ್ನು ಹತ್ಯೆ ಮಾಡಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕಾವೇರಿನಗರದ ಮಹದೇಶ್ವರ ದೇವಸ್ಥಾನದ ಬಳಿ ಘಟನೆ ನಡೆದಿದೆ. 

ನರಸಿಂಹ ರಾಜು (70), ಸರಸ್ವತಿ (60) ಹತ್ಯೆಯಾದ ವೃದ್ಧ ದಂಪತಿ. ಮೂಲತಃ ಮೈಸೂರಿನವರಾದ ದಂಪತಿ, ಕಳೆದ ಒಂದು ವರ್ಷದಿಂದ ಕಾವೇರಿಪುರದ ನಿವಾಸದಲ್ಲಿ ವಾಸವಾಗಿದ್ದರು. 

ಹತ್ಯೆಯಾದ ನರಸಿಂಹರಾಜು ಅವರು ಮುಂಚೆ ಮದುವೆ ದಲ್ಲಾಳಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತ ಸರಸ್ವತಿ ಅವರು ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಆದರೆ, ಕೆಲ ವರ್ಷಗಳಿಂದ ಕೆಲಸ ಬಿಟ್ಟು ಅವರಿಬ್ಬರೂ ಮನೆಯಲ್ಲೇ ಇದ್ದರು ಎನ್ನಲಾಗಿದೆ.

ಘಟನೆ ಬಳಿಕ ನಿನ್ನೆ ರಾತ್ರಿಯಿಂದ ವೃದ್ಧ ದಂಪತಿ ಪುತ್ರ ಸಂತೋಷ್ ನಾಪತ್ತೆಯಾಗಿದ್ದು, ಆತನೇ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಆಡಿಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸಂತೋಷ್ ಕೂಡ ಪೋಷಕರೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಕಾಮಾಕ್ಷಿಪಾಳ್ಯದಲ್ಲೇ ತನ್ನ ಸ್ವಂತ ಕಚೇರಿ ಹೊಂದಿದ್ದ ಎಂದು ತಿಳಿದು ಬಂದಿದೆ.

ಬುಧವಾರ ಬೆಳಗ್ಗೆ 8.30ರ ಸುಮಾರಿಗೆ ಕೆಲಸದಾಕೆ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!