ಅಮೂಲ್ಯ ಲಿಯೋನಾ 
ರಾಜ್ಯ

ಪಾಕ್ ಪರ ಘೋಷಣೆ ಪ್ರಕರಣ: ಅಮೂಲ್ಯ ಲಿಯೋನ್‍ಗೆ ಷರತ್ತು ಬದ್ಧ ಜಾಮೀನು ಮಂಜೂರು

ಕೇಂದ್ರ ಸರ್ಕಾರದ ಸಿಎಎ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಬಂಧನಕ್ಕೊಳಗಾಗಿದ್ದ ಅಮೂಲ್ಯ ಲಿಯೋನಾಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರು: ಕೇಂದ್ರ ಸರ್ಕಾರದ ಸಿಎಎ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಬಂಧನಕ್ಕೊಳಗಾಗಿದ್ದ ಅಮೂಲ್ಯ ಲಿಯೋನಾಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಅಮೂಲ್ಯ ಲಿಯೋನ್‍ಗೆ ನಗರದ ಸಿಟಿ ಸಿವಿಲ್ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಅಮೂಲ್ಯ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠವು, ಇಂದು ರಾತ್ರಿ ಜಾಮೀನು ಮಂಜೂರು ಮಾಡಿತು. ಅರ್ಜಿದಾರರ ಪರ ವಾದಿಸಿದ ವಕೀಲರು, ಅರ್ಜಿದಾರರಾದ ಅಮೂಲ್ಯ ಇನ್ನೂ 19 ವರ್ಷ ವಯಸ್ಸಿನ ಯುವತಿ. ನಗರದ ಖಾಸಗಿ ಕಾಲೇಜೊಂದರಲ್ಲಿ ಓದುತ್ತಿದ್ದಾರೆ. ಅವರು ಪಾಕಿಸ್ತಾನ ಜಿಂದಾಬಾದ್ ಎಂದಷ್ಟೇ ಕೂಗಿದ್ದಾರೆ. ಪಾಕಿಸ್ತಾನವನ್ನು ನಮ್ಮ ದೇಶ ಎಂದು ಎಲ್ಲಿಯೂ ಉಲ್ಲೇಖಿಸಿಲ್ಲ ಮತ್ತು ಘೋಷಣೆ ಮಾಡಿಲ್ಲ. ಹೀಗಾಗಿ, ಜಾಮೀನು ನೀಡಬೇಕೆಂದು ಮನವಿ ಮಾಡಿದರು. 

ಈ ಹಿಂದೆ 19 ವರ್ಷದ ಅಮೂಲ್ಯ ಲಿಯೋನ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 60ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ಕೋರ್ಟ್‌ನ ನ್ಯಾಯಮೂರ್ತಿ ವಿದ್ಯಾಧರ್‌ ಶಿರಹಟ್ಟಿ ತಿರಸ್ಕರಿಸಿದ್ದರು. ಪ್ರಕರಣದ ಬಗ್ಗೆ ತನಿಖೆ ಪೂರ್ಣಗೊಳ್ಳದಿರುವುದು ಹಾಗೂ ಪೊಲೀಸ್‌ ಅಧಿಕಾರಿಗಳು ಇದುವರೆಗೂ ಚಾರ್ಜ್‌ಶೀಟ್‌ ಸಲ್ಲಿಸಿಲ್ಲವಾದ್ದರಿಂದ ಜಾಮೀನು ಅರ್ಜಿ ವಜಾಗೊಳಿಸಲಾಗಿತ್ತು. ಇದೀಗ ಸಿಟಿ ಸಿವಿಲ್ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಏನಿದು ಪ್ರಕರಣ?
ಫೆ.20ರಂದು ಕೆಲ ಸಂಘಟನೆಗಳು ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಗರದ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅಮೂಲ್ಯ ಲಿಯೋನ್ ವೇದಿಕೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಳು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಆಕೆಯನ್ನು ವಶಕ್ಕೆ ತೆಗೆದುಕೊಂಡಿದ್ದರು. ನಂತರ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಅಮೂಲ್ಯ ವಿರುದ್ಧ ಐಪಿಸಿ ಸೆಕ್ಷನ್ 124(ಎ), 153(ಎ)(ಬಿ), 505(2) ಅಡಿ ದೇಶದ್ರೋಹ, ಸಾಮಾಜಿಕ ಶಾಂತಿ ಕದಡಿದ ಆರೋಪದಡಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಅಂದಿನಿಂದ ಈವರೆಗೂ ಕಾರಾಗೃಹದಲ್ಲಿರುವ ಅಮೂಲ್ಯ ಜಾಮೀನಿಗಾಗಿ ನಿರಂತರ ಪ್ರಯತ್ನ ನಡೆಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT