ಸಾಂದರ್ಭಿಕ ಚಿತ್ರ 
ರಾಜ್ಯ

ವಿವಿಧ ಹುದ್ದೆಗಳ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದ ಕೆಪಿಎಸ್​​ಸಿ

ಕರ್ನಾಟಕ ಲೋಕಸೇವಾ ಆಯೋಗದಿಂದ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ವೃಂದದ 106 ಹುದ್ದೆಗಳಿಗೆ ಪರೀಕ್ಷಾ ದಿನಾಂಕ ಪ್ರಕಟಿಸಿದೆ.

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ವೃಂದದ 106 ಹುದ್ದೆಗಳಿಗೆ ಪರೀಕ್ಷಾ ದಿನಾಂಕ ಪ್ರಕಟಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಲೋಕಸೇವಾ ಆಯೋಗ, ಕೋವಿಡ್-19 ಸೋಂಕಿನ ಭೀತಿಯಿಂದಾಗಿ ಈ ಹಿಂದೆ ನಿಗದಿಪಡಿಸಲಾಗಿದ್ದ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 18-03-2020 ಮತ್ತು 24-04-2020ರ ಪತ್ರಿಕಾ ಪ್ರಕಟಣೆಗಳಲ್ಲಿ ಮುಂದೂಡಲಾಗಿತ್ತು. ಪ್ರಸ್ತುತ ಪರೀಕ್ಷೆಗಳನ್ನು ನಡೆಸಲು ದಿನಾಂಕಗಳನ್ನು ಮರುನಿಗದಿಪಡಿಸಿದೆ. ದಿನಾಂಕ 02-08-2020ರಂದು ಕೆಎಎಸ್ ಹುದ್ದೆಗಳಿಗೆ ಪ್ರಿಲಿಮಿನರಿ ಪರೀಕ್ಷೆ ನಡೆಯಲಿದೆ. 

ಕರ್ನಾಟಕ ರಾಜ್ಯ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ ಗ್ರೂಪ್ ಎ ವೃಂದದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ 24ಹುದ್ದೆಗಳಿಗೆ ದಿನಾಂಕ 07-07-2020ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. (ಬೆಳಗ್ಗೆ 10 ರಿಂದ 12 ರ ವರೆಗೆ ಪತ್ರಿಕೆ 1- ಸಾಮಾನ್ಯ ಅಧ್ಯಯನ ಹಾಗೂ ಮಧ್ಯಾಹ್ನ 2.30 ರಿಂದ 4.30ರ ವರೆಗೆ ಪತ್ರಿಕೆ 2). 

ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಮೂಹ ಎ ವೃಂದದ ಸಹಾಯಕ ನಿಯಂತ್ರಣಕರು 54 ಹುದ್ದೆಗಳಿಗೆ ದಿನಾಂಕ 19-07-2020ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. (ಬೆಳಗ್ಗೆ 10 ರಿಂದ 12 ರ ವರೆಗೆ ಪತ್ರಿಕೆ 1 - ಸಾಮಾನ್ಯ ಅಧ್ಯಯನ ಹಾಗೂ ಮಧ್ಯಾಹ್ನ 2 ರಿಂದ 4 ವರೆಗೆ ಪತ್ರಿಕೆ 2- ವಾಣಿಜ್ಯಶಾಸ್ತ್ರ ಮತ್ತು ನಿರ್ವಹಣೆ ವಿಷಯದ ಪರೀಕ್ಷೆ ನಡೆಯಲಿದೆ).  ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು 106 ಹುದ್ದೆಗಳಿಗೆ ದಿನಾಂಕ 02-08-2020ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಅಂದು ಬೆಳಗ್ಗೆ 10 ರಿಂದ 12 ರವರೆಗೆ ಪತ್ರಿಕೆ 1, ಹಾಗೂ ಮಧ್ಯಾಹ್ನ 2 ರಿಂದ 4 ರ ವರೆಗೆ ಪತ್ರಿಕೆ 2ರ ಪರೀಕ್ಷೆ ನಡೆಯಲಿದೆ ಎಂದು ಕೆಪಿಎಸ್​​ಸಿ ಪ್ರಕಟಣ ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT