ಆದಿತ್ಯ ರಾವ್ 
ರಾಜ್ಯ

ಮಂಗಳೂರು ವಿಮಾನ ನಿಲ್ದಾಣ ಬಾಂಬ್ ಪ್ರಕರಣ: ಪೋಲೀಸರಿಂದ 700 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ

ಜನವರಿ 20 ರಂದು ನಡೆದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಾಂಬ್ ಸ್ಫೋಟ ಯತ್ನದ ಪ್ರಕರಣ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ನಗರದ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಗುರುವಾರ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.

ಮಂಗಳೂರು: ಜನವರಿ 20 ರಂದು ನಡೆದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಾಂಬ್ ಸ್ಫೋಟ ಯತ್ನದ ಪ್ರಕರಣ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ನಗರದ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಗುರುವಾರ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.

ಗೃಹ ಇಲಾಖೆಯ ಕಾರ್ಯದರ್ಶಿಯಿಂದ ಅಗತ್ಯ ಅನುಮತಿ ಪಡೆದ ನಂತರ 700 ಪುಟಗಳ ಚಾರ್ಜ್‌ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಚಾರ್ಜ್‌ಶೀಟ್‌ನ ಪ್ರಕಾರ, ಎಸಿಪಿ ಬೆಳ್ಳಿಯಪ್ಪ ನೇತೃತ್ವದ ಪೊಲೀಸ್ ತನಿಖಾ ತಂಡವು ಜನರು ಮತ್ತು ಅಧಿಕಾರಿಗಳಲ್ಲಿ ಭಯ ಹುಟ್ಟಿಸುವ ಸಲುವಾಗಿ ಆರೋಪಿ ಆದಿತ್ಯ ರಾವ್ ವಿಮಾನ ನಿಲ್ದಾಣದಲ್ಲಿ ಸ್ಫೋಟಕವನ್ನು ಅಳವಡಿಸಿರುವುದು  ಪತ್ತೆಯಾಗಿದೆ. ವಿಮಾನ ನಿಲ್ದಾಣದ ಟರ್ಮಿನಲ್ ಪ್ರವೇಶದ್ವಾರದಲ್ಲಿ ಅಳವಡಿಸಲಾಗಿದ್ದ  ಬಾಂಬ್ ಶೀಘ್ರದಲ್ಲೇ ಪತ್ತೆಯಾಗಿದ್ದು ವಿಮಾನ ನಿಲ್ದಾಣದಿಂದ ಕೆಲವು ಕಿಲೋಮೀಟರ್ ದೂರದಲ್ಲಿ ಅದನ್ನು ನಾಶಪಡಿಸಲಾಗಿದೆ.

ಆರೋಪಿ ಪ್ರಸ್ತುತ ಜೈಲಿನಲ್ಲಿದ್ದು, ಸಾಂಕ್ರಾಮಿಕ ರೋಗ ಕೊರೋನಾ ಕಾರಣದಿಂದಾಗಿ ಆತನ ಬ್ರೈನ್ ಮ್ಯಾಪಿಂಗ್  ಪರೀಕ್ಷೆ ಬಾಕಿ ಇದೆ. ಘಟನೆ ನಡೆದ ಎರಡು ದಿನಗಳ ನಂತರ ರಾವ್ ಬೆಂಗಳೂರಿನ ಐಜಿಪಿ ಕಚೇರಿಯಲ್ಲಿ ಪೊಲೀಸರಿಗೆ ಶರಣಾಗಿದ್ದ. ಘಟನೆಯ ವಿಚಾರಣೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡವು ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ರಾವ್ರೆಸ್ಟೋರೆಂಟ್‌ಗಳಲ್ಲಿ ಕೆಲಸ ಮಾಡುವಾಗ ಬಾಂಬ್ ಯೋಜನೆ ಸಿದ್ದಪಡಿಸಿದ್ದ ಎನ್ನುವುದನ್ನು ಕಂಡುಕೊಂಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT