ರಾಜ್ಯ

ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿ ಚಾರ್ಜ್‌ಶೀಟ್ ಸಲ್ಲಿಸಲು ವಿಳಂಬ: ಹುಬ್ಬಳ್ಳಿ ಗ್ರಾಮೀಣ ಠಾಣೆ ಇನ್ಸ್‌ಪೆಕ್ಟರ್ ಅಮಾನತು

Raghavendra Adiga

ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ವಿಳಂಬ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ಓರ್ವರನ್ನು ಅಮಾನತು ಮಾಡಲಾಗಿದೆ.

‌ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್‌ಪೆಕ್ಟರ್ ಜಾಕ್ಸನ್ ಡಿಸೋಜಾ ಅವರನ್ನು ಅಮಾನತುಗೊಳಿಸಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್ ಆದೇಶಿಸಿದ್ದಾರೆ.

ನಿಯಮದಂತೆ 90 ದಿನಗಳಲ್ಲಿ ಆರೋಪ ಪಟ್ಟಿ ಸಲ್ಲಿಸಬೇಕಿದ್ದರೂ ಸಹ ಅಮಾನತಿಗೊಳಗಾದ ಇನ್ಸ್‌ಪೆಕ್ಟರ್ ನಿಗದಿತ ಅವಧಿಯೊಳಗೆ ಚಾರ್ಜ್ ಶೀಟ್ ಸಲ್ಲಿಸಲು ವಿಫಲವಾಗಿದ್ದಾರೆ. ಇವರ ಈ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಎರಡನೆಯ ಜೆಎಮ್‌ಎಫ್‌ಸಿ ನ್ಯಾಯಾಲಯ ಕಾಶ್ಮೀರಿ ವಿದ್ಯಾರ್ಥಿಗಳಿಗೆ ಸಿಆರ್‌ಪಿಸಿ 167(2) ಅಡಿ ಷರತ್ತುಬದ್ಧ ಜಾಮೀನು ನೀಡಿತ್ತು.

ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕಾಶ್ಮೀರದ ತಾಲಿಬ್, ಆಮಿರ್, ಬಾಸಿತ್‌‌ ಎಂಬ ವಿದ್ಯಾರ್ಥಿಗಳು ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ.ದೇಶದ್ರೋಹ ಪ್ರಕರಣ ದಾಖಲಾಗಿದ್ದರೂ ಜಾಮೀನು ಪಡೆದು ಹೊರಬಂದ ಆರೋಪಿ ಯುವಕರ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. 

SCROLL FOR NEXT