ರಾಜ್ಯ

ಶೀಘ್ರದಲ್ಲೇ ಆಶಾ ಕಾರ್ಯಕರ್ತೆಯರಿಗೆ ಸಹಕಾರ ಇಲಾಖೆಯಿಂದ ಸಾಲ; ಸಚಿವ ಎಸ್ ಟಿ ಸೋಮಶೇಖರ್

Raghavendra Adiga

ದಾವಣಗೆರೆ: ಶೀಘ್ರದಲ್ಲಿ ಆಶಾ ಕಾರ್ಯಕರ್ತೆಯರಿಗೂ ಸಹಕಾರ ಇಲಾಖೆ ವತಿಯಿಂದ ಸಾಲ ಕೊಡಿಸುವ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.

ಕೋವಿಡ್ -19 ವಿರುದ್ಧ ಹೋರಾಡಿದ ಆಶಾ ಕಾರ್ಯಕರ್ತೆಯರಿಗೆ ಸರ್ಕಾರದಿಂದ ತಲಾ 3 ಸಾವಿರ ರೂಪಾಯಿ ಸಹಾಯಧನ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಸಹ ಚರ್ಚಿಸಲಾಗಿದೆ ಎಂದು ಕೊರೋನಾ ಸಂಕಷ್ಟದ ಸಮಯದಲ್ಲಿ ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ ಸಹಕಾರ ಇಲಾಖೆಯಿಂದ 53 ಕೋಟಿ ರೂ.ಗಳನ್ನು ಸಂಗ್ರಹಿಸಿ ನೀಡಿದ್ದೇವೆ. ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಕೊಡುವ ವಿಚಾರದಲ್ಲೂ ಮುಖ್ಯಮಂತ್ರಿಗಳಿಗೆ ಸಹಕಾರ ನೀಡಿದ್ದೇವೆ ಎಂದರು. 

ಕೊರೋನಾ ನಿಯಂತ್ರಣಕ್ಕೆ ಹಗಲಿರುಳು ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರಿಗೆ ತಲಾ ಮೂರು ಸಾವಿರ ರೂ.ನಂತೆ 12.7 ಕೋಟಿ ರೂ. ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

SCROLL FOR NEXT