ಸಂಗ್ರಹ ಚಿತ್ರ 
ರಾಜ್ಯ

ಬನ್ನೇರುಘಟ್ಟ ರಸ್ತೆಯಲ್ಲಿ ದೊಡ್ಡ ಮಟ್ಟದಲ್ಲಿಯೇ ಪಾಲಿಕೆ ಆಸ್ತಿ ಒತ್ತುವರಿ: ಶಾಕ್ ಆದ ಮೇಯರ್ ಗೌತಮ್

ಹೊಂಬೇಗೌಡನಗರ ವಾರ್ಡ್'ನ ಬನ್ನೇರುಘಟ್ಟ ರಸ್ತೆ, ಮೈಕೋ ಫ್ಯಾಕ್ಟರಿ ಹಿಂಭಾಗ, ಲಕ್ಕಸಂದ್ರ ಗ್ರಾಮದ ಸರ್ವೆ ಸಂ.14 ಪ್ರದೇಶಗಳಲ್ಲಿ ಅನಧಿಕೃತವಾಗಿ ಒತ್ತುವರಿಯಾಗಿರುವ ಜಾಗವನ್ನು ವಶಕ್ಕೆ ಪಡೆದು ನಾಮಫಲಕ ಅಳವಡಿಸುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಅವರು ನಿರ್ದೇಶಿಸಿದ್ದಾರೆ. 

ಬೆಂಗಳೂರು: ಹೊಂಬೇಗೌಡನಗರ ವಾರ್ಡ್'ನ ಬನ್ನೇರುಘಟ್ಟ ರಸ್ತೆ, ಮೈಕೋ ಫ್ಯಾಕ್ಟರಿ ಹಿಂಭಾಗ, ಲಕ್ಕಸಂದ್ರ ಗ್ರಾಮದ ಸರ್ವೆ ಸಂ.14 ಪ್ರದೇಶಗಳಲ್ಲಿ ಅನಧಿಕೃತವಾಗಿ ಒತ್ತುವರಿಯಾಗಿರುವ ಜಾಗವನ್ನು ವಶಕ್ಕೆ ಪಡೆದು ನಾಮಫಲಕ ಅಳವಡಿಸುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಅವರು ನಿರ್ದೇಶಿಸಿದ್ದಾರೆ. 

ಗುರುವಾರ ಒತ್ತುವರಿಯಾಗಿರುವ ಜಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಹೊಂಬೇಗೌಡ ನಗರ ವಾರ್ಡ್'ನ ಬನ್ನೇರುಘಟ್ಟ ರಸ್ತೆ, ಮೈಕೋ ಫ್ಯಾಕ್ಟರಿ ಹಿಂಭಾಗ, ಲಕ್ಕಸಂದ್ರ ಗ್ರಾಮದ ಸರ್ವೆ ನಂ.14 ಜಾಗ ಪಾಲಿಕೆಯ ಆಸ್ತಿಗಳಾಗಿವೆ. ಈ ಭಾಗದಲ್ಲಿ ಅನಧಿಕೃತವಾಗಿ ಮಾರ್ಬಲ್ ಅಂಗಡಿಗಳು ಸೇರಿದಂತೆ ವಿವಿಧ ಉದ್ದೇಶಕ್ಕೆ ಬಳಸಿಕೊಳ್ಳಲಾಗುತ್ತಿದೆ. ಈ ಭಾಗಗಳಲ್ಲಿ ಅಂದಾಜು 10.4 ಎಕರೆ ಪಾಲಿಕೆಗೆ ಸೇರಬೇಕಾಗಿದೆ. ಕೂಡಲೇ ಸರ್ವೇ ಮಾಡಿ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. 

ಜೊತೆಗೆ ನಗರದ ಪಾಲಿಕೆಯ ಒಡೆತನದ ಆಸ್ತಿಗಳನ್ನು ಸರ್ವೇ ಮಾಡಿ, ವಶಕ್ಕೆ ಪಡೆಯುವ ಕಾರ್ಯಾಚರಣೆ ವೇಳೆ ಪೊಲೀಸ್ ಸಿಬ್ಬಂದಿ ಸಹಕಾರದೊಂದಿಗೆ ನಾಮಫಲಕ ಅಳವಡಿಸುವಂತೆ ನಿರ್ದೇಶನ ನೀಡಲಾಗಿದೆ. ಸರ್ವೇ ಮಾಡಿ ಅತಿಕ್ರಮಗೊಂಡ ಸರ್ಕಾರಿ ಆಸ್ತಿಯನ್ನು ವಶಕ್ಕೆ ಪಡೆಯಬೇಕು. ಈ ರೀತಿ ಪಾಲಿಕೆಯ ಜಾಗ ಒತ್ತುವರಿ ಮಾಡಿರುವವರಿಗೆ ಬಿಬಿಎಂಪಿ ಅಧಿಕಾರಿಗಳು ಸಹಾಯ ಮಾಡಿದ್ದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ವಿಶೇಷ ಆಯುಕ್ತರಿಗೆ ಸೂಚಿಸಲಾಗಿದೆ ಎಂದರು.

ಈ ವೇಳೆ ಉಪಮಹಾಪೌರರು ಶ್ರೀ ರಾಮಮೋಹನ ರಾಜು, ಬೃಹತ್ ಸಾರ್ವಜನಿಕ ಕಾಮಗಾರಿ ಸ್ಥಾಯಿ ಸಮಿತಿ ಅಧ್ಯಕ್ಷರು ಶ್ರೀ ಮೋಹನ್ ಕುಮಾರ್, ವಿಶೇಷ ಆಯುಕ್ತರು(ಆಸ್ತಿಗಳು) ಶ್ರೀ ಜಿ.ಮಂಜುನಾಥ್ ಹಾಗೂ ಇತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!