ಸಪ್ತಗಿರಿ ಆಸ್ಪತ್ರೆ 
ರಾಜ್ಯ

ತ್ರಿಕೋನ ಪ್ರೇಮ ಕಥೆ: ಪ್ರಿಯಕರನಿಂದಲೇ ಹಲ್ಲೆಗೊಳಗಾದ ಯುವತಿ ದುರ್ಮರಣ

ಮಾಜಿ ಪ್ರಿಯಕರನಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೇ  ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ಶುಕ್ರವಾರ ನಡೆದಿದೆ‌.

ಬೆಂಗಳೂರು: ಮಾಜಿ ಪ್ರಿಯಕರನಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೇ  ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ಶುಕ್ರವಾರ ನಡೆದಿದೆ‌.

ಎಂಜಿಯರಿಂಗ್ ವಿದ್ಯಾರ್ಥಿನಿ ಮೋನಿಕಾ (22) ಮೃತ ಯುವತಿ. ಜೂ. 7 ರಂದು ಮೋನಿಕಾ ಮೇಲೆ ಪ್ರಿಯಕರ ಹಲ್ಮೇಟ್ ನಿಂದ ಮಾರಣಾಂತಿಕ ಹಲ್ಲೆ ಮಾಡಿದ ಪರಿಣಾಮ ಆಕೆ ನಗರದ ಸಪ್ತಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ  ಕೊನೆಯುಸಿರೆಳೆದಿದ್ದಾಳೆ‌. 

ಆರ್ಕಿಟೆಕ್ಟರ್ ಎಂಜಿನಿಯರಿಂಗ್ ಪದವಿ ಮುಗಿಸಿ ತಂದೆ ಖರೀದಿಸಿದ್ದ ಸೈಟ್ ನಲ್ಲಿ ಮನೆ ಕಟ್ಟಿ ಜೀವನ ಕಟ್ಟಿಕೊಳ್ಳುವ ಆಸೆಯಲ್ಲಿದ್ದ ಮೋನಿಕಾ ಬೆಂಗಳೂರಿನ ಸಿಡೆದಹಳ್ಳಿಯ ನಿವಾಸಿ, ಸೋಲದೇವನಹಳ್ಳಿ ರಸ್ತೆಯ ಆಚಾರ್ಯ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಳು. ಕಳೆದ ಐದು ವರ್ಷದ ಹಿಂದೆ ಚಿಕ್ಕಬಾಣಾವಾರದ ನಿವಾಸಿ ಬಬೀತ್ ಜೊತೆ ಪ್ರೇಮಾಂಕುರವಾಗಿದೆ. ಆದರೆ, ಇತ್ತೀಚಿಗೆ ಮೋನಿಕಾಗೆ ಬಬಿತ್ ಸ್ನೇಹಿತ ರಾಹುಲ್ ಜೊತೆಗೆ ಪ್ರೀತಿ ಶುರುವಾಗಿದೆ.

ಕಳೆದ ಆರು ತಿಂಗಳಿನಿಂದ ರಾಹುಲ್ ಜೊತೆಗೆ ಓಡಾಡಿಕೊಂಡಿದ್ದ ಮೋನಿಕಾ, ಭಾನುವಾರ ಸಂಜೆ ರಾಹುಲ್ ಮನೆಗೆ ಪಾರ್ಟಿಗೆಂದು ತೆರಳಿದ್ದಾಗ ಅಲ್ಲಿಗೆ ಬಂದ ಬಬಿತ್ ಮೋನಿಕಾಳ ಮೇಲೆ ಹಲ್ಲೆ ಮಾಡಿದ್ದಾನೆ. ಅಲ್ಲದೇ, ಬಬಿತ್ ಮನೆಗೆ ಮೋನಿಕಾಳನ್ನು ಕರೆತಂದು ಅಲ್ಲಿಯೂ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಬಳಿಕ ಮೋನಿಕಾ ಪೋಷಕರಿಗೆ ಕರೆ ಮಾಡಿ ಮಗಳಿಗೆ ಅಪಘಾತವಾಗಿದೆ. ಮನೆ ಬಳಿ ಇದ್ದಾಳೆ ಬನ್ನಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದಿದ್ದಾನೆ. ತಕ್ಷಣ ಸ್ಥಳಕ್ಕೆ ಆಗಮಿಸಿದ್ದ ಮೋನಿಕಾ ಪೋಷಕರು ಆಕೆಯನ್ನು ಸಪ್ತಗಿರಿ ಆಸ್ಪತ್ರೆಗೆ ಸೇರಿಸಿದ್ದರು. 

ಘಟನೆಗೆ ಸಂಬಂಧಿಸಿದಂತೆ ಸೋಲದೇವನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಎಲ್ಲಾ ಪ್ರಕರಣಗಳು ಬೆಳಕಿಗೆ ಬಂದಿದೆ. ಸದ್ಯ ಬಬಿತ್ ನನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT