ಕೊರೋನಾ: ರಾಜ್ಯ ಪರಿಸ್ಥಿತಿ ಕುರಿತು ಉನ್ನತಾಧಿಕಾರಿಗಳೊಂದಿಗೆ ಸಿಎಂ ಸಭೆ
ಜೂನ್.17ರಂದು ಕೊರೋನಾ ಪರಿಸ್ಥಿತಿ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಕೊರೋನಾ ಪರಿಸ್ಥಿತಿ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉನ್ನಾತಾಧಿಕಾರಿಗಳೊಂದಿಗೆ ಜು.15ರಂದು ಸಭೆ ನಡೆಸಿ ಮಾತುಕತೆ ನಡೆಸಲಿದ್ದಾರೆ.
ಬೆಂಗಳೂರು: ಜೂನ್.17ರಂದು ಕೊರೋನಾ ಪರಿಸ್ಥಿತಿ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಕೊರೋನಾ ಪರಿಸ್ಥಿತಿ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉನ್ನಾತಾಧಿಕಾರಿಗಳೊಂದಿಗೆ ಜು.15ರಂದು ಸಭೆ ನಡೆಸಿ ಮಾತುಕತೆ ನಡೆಸಲಿದ್ದಾರೆ.
ಮಂಗಳವಾರ ಹಾಗೂ ಬುಧವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿಯವರು ಮಾತುಕತೆ ನಡೆಸಲಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ಗುಜರಾತ್ ಮತ್ತು ರಾಜಸ್ಥಾನ ಸೇರಿದಂತೆ ಒಟ್ಟು 15 ರಾಜ್ಯಗಳ ಜೊತೆಗೆ ಪ್ರಧಾನಿ ಮೋದಿಯವರು ವಿಡಿಯೋ ಸಂವಾದ ನಡೆಸಲಿದ್ದಾರೆ.
ಪ್ರಧಾನಿ ಮೋದಿಯವರಿಗೆ ಮಾತುಕತೆ ನಡೆಸುವ ವೇಳೆ ವಿಚಾರಗಳ ಬಗ್ಗೆ ಸ್ಪಷ್ಟನೆಗಳಿರಬೇಕಾದ ಅಗತ್ಯವಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಎಲ್ಲಾ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಕೊರೋನಾ ಪರಿಸ್ಥಿತಿ ಕುರಿತಂತೆ ಎಲ್ಲಾ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ಮಾತುಕತೆ ನಡೆಸುವ ಸಾಧ್ಯತೆಗಳಿವೆ ಎಂದು ರಾಜ್ಯ ಮುಖ್ಯ ಕಾರ್ಯದರ್ಶಿಗಳಾದ ಟಿಎಂ. ವಿಜಯಭಾಸ್ಕರ್ ಅವರು ಹೇಳಿದ್ದಾರೆ.