ರಾಜ್ಯದಲ್ಲಿ ಕೊರೋನಾ ರಣಕೇಕೆ: ಸಿಲಿಕಾನ್ ಸಿಟಿಯಲ್ಲಿ 23 ವರ್ಷದ ಯುವಕನನ್ನು ಬಲಿ ಪಡೆದ ಮಹಾಮಾರಿ
ರಾಜ್ಯದಲ್ಲಿ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದ್ದು, ಸಿಲಿಕಾನ್ ಸಿಟಿಯಲ್ಲಿ ಇದೇ ಮೊದಲ ಬಾರಿಗೆ 23 ಯುವಕರೊಬ್ಬರು ಮಹಾಮಾರಿ ವೈರಸ್'ಗೆ ಬಲಿಯಾಗಿದ್ದಾರೆ. ನಗರದಲ್ಲಿ ಈ ವರೆಗೆ ಮೃತಪಟ್ಟ ಅತೀ ಕಿರಿಯರಾಗಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದ್ದು, ಸಿಲಿಕಾನ್ ಸಿಟಿಯಲ್ಲಿ ಇದೇ ಮೊದಲ ಬಾರಿಗೆ 23 ಯುವಕರೊಬ್ಬರು ಮಹಾಮಾರಿ ವೈರಸ್'ಗೆ ಬಲಿಯಾಗಿದ್ದಾರೆ. ನಗರದಲ್ಲಿ ಈ ವರೆಗೆ ಮೃತಪಟ್ಟ ಅತೀ ಕಿರಿಯರಾಗಿದ್ದಾರೆ.
ಸೋಂಕಿನ ಲಕ್ಷಣಗಳು ಹಾಗೂ ತಲೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಜೆಪಿ ನಗರದ 23 ವರ್ಷದ ಯುವಕನನ್ನು ನಗರದ ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇವರು ಜ್ವರ, ವಾಂತಿ, ಭೇದಿಯಿಂದ ಸಮಸ್ಯೆಯನ್ನು ಎದುರಿಸುತ್ತಿದ್ದರು. ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವೇಳೆ ಕೊರೋನಾ ಸೋಂಕು ಪರೀಕ್ಷೆಗೆ ಒಳಪಡಿಸಲಾಗಿದ್ದು, ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ತಡರಾತ್ರಿ ಮೃತಪಟ್ಟಿದ್ದಾರೆ.