ಬೆಂಗಳೂರು: ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ ಮನವೊಲಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲಾಗುವುದು. ಕಾಯ್ದೆಗೆ ತಿದ್ದುಪಡಿ ತರಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಹಕರಿಸಬೇಕು ಎಂದು ಹೇಳಿದ್ದಾರೆ.
ಕಾಯ್ದೆ ತಿದ್ದುಪಡಿಯನ್ನು ಎಲ್ಲರೂ ಸ್ವಾಗತಿಸಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸುತ್ತೇನೆಂದು ತಿಳಿಸಿದ್ದಾರೆ.
ಭೂ ಸುಧಾರಣೆ ಕಾಯ್ದೆಯು ಬಂಡವಾಳ ಹೂಡಿಕೆಯನ್ನು ಆಕರ್ಷಿಸಲಿದೆ. ಕಾಯ್ದೆ ತಿದ್ದುಪಡಿ ದುರ್ಬಳಕೆಯಾಗಲು ನಾನು ಬಿಡುವುದಿಲ್ಲ ಎಂದಿದ್ದಾರೆ.