ಬೊಲೆರೊ ವಾಹನ ಅಪಘಾತ 
ರಾಜ್ಯ

ಚಾಮರಾಜನಗರ: ಬೊಲೆರೋ ವಾಹನ ಪಲ್ಟಿ, 3 ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

ಬೊಲೆರೋ ಪಿಕ್ ಅಪ್ ವಾಹನವೊಂದು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿ ಹದಿನೈದಕ್ಕೆ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರುವಿನಲ್ಲಿ ನಡೆದಿದೆ.

ಚಾಮರಾಜನಗರ: ಬೊಲೆರೋ ಪಿಕ್ ಅಪ್ ವಾಹನವೊಂದು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿ ಹದಿನೈದಕ್ಕೆ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರುವಿನಲ್ಲಿ ನಡೆದಿದೆ.

ಹನೂರು ತಾಲೂಕಿನ ಕೊರಮನಕತ್ತರಿ ಜೆ.ವಿಲೇಜ್ ಬಳಿ ಸಂಭವಿಸಿದ ಅಪಘಾತದಲ್ಲಿ  ಹುಣಸೇಪಾಳ್ಯದ ಚಿಕ್ಕಸಿದ್ದಮ್ಮ(55), ನಂಜುಂಡಯ್ಯ (60) ಹಾಗು ನಾಗರಾಜು(60)  ಎನ್ನುವವರು ಸಾವನ್ನಪ್ಪಿದ್ದಾರೆ. ಬೊಲೆರೋ ವಾಹನದಲ್ಲಿದ್ದವರು ವಿವಾಹ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದರೆಂದು ತಿಳಿದುಬಂದಿದೆ.

ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿಯಲ್ಲಿ ವಿವಾಹ ನಡೆದಿದ್ದು ಅಲ್ಲಿಂದ ಹಿಂತಿರುಗುವ ಸಮಯದಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಾಯಾಳುವಾದವರನ್ನು  ಕೊಳ್ಳೇಗಾಲ ತಾಲೂಕು ಸಾರ್ವಜನಿಕ  ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಹದಿನೈದರಲ್ಲಿ ಐದು ಮಂದಿಯ ಸ್ಥಿತಿ ಗಂಭೀರವಾಗಿದೆ.

ಘಟನೆ ಸ್ಥಳಕ್ಕೆ  ಹನೂರು ಪೊಲೀಸರು ಧಾವಿಸಿ ವಾಹನದಡಿ ಸಿಲುಕಿದವರನ್ನು ಹೊರತೆಗೆಯಲು ಸಹಕರಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಬಂಡೀಪುರದಲ್ಲಿ ದಂತವಿಲ್ಲದ ಆನೆಯ ಕಳೇಬರ ಪತ್ತೆ; ನಟೋರಿಯಸ್ ಬವಾರಿಯಾ ಗ್ಯಾಂಗ್‌ ನಂಟಿನ ಶಂಕೆ

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಅವನನ್ನು ಹಾಳು ಮಾಡಿದ್ದೇ ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್'!: ವೈಭವ್ ಸೂರ್ಯವಂಶಿ ಕುರಿತು ಗಂಭೀರ್‌ ವಿರುದ್ಧ ವಿಶ್ವಕಪ್‌ ವಿಜೇತ ಆಟಗಾರ ಕಿಡಿ