ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತಿತರರು 
ರಾಜ್ಯ

ಹಾಸ್ಟೆಲ್ ವಿದ್ಯಾರ್ಥಿಗಳ ಆರೋಗ್ಯದ ಕಡೆಗೆ ಗಮನಹರಿಸಿ: ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿ

ಸಮಾಜ ಕಲ್ಯಾಣ ಇಲಾಖೆ ನಡೆಸುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಇರುವ ಬೇಡಿಕೆ ಕುರಿತಂತೆ ಸಮೀಕ್ಷೆ ನಡೆಸಿ, ಜೊತೆಗೆ ವಿದ್ಯಾರ್ಥಿಗಳ ಆರೋಗ್ಯ ಬಗ್ಗೆ ಹೆಚ್ಚನ ಗಮನ ಕೊಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ನಡೆಸುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಇರುವ ಬೇಡಿಕೆ ಕುರಿತಂತೆ ಸಮೀಕ್ಷೆ ನಡೆಸಿ, ಜೊತೆಗೆ ವಿದ್ಯಾರ್ಥಿಗಳ ಆರೋಗ್ಯ ಬಗ್ಗೆ ಹೆಚ್ಚನ ಗಮನ ಕೊಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಅವರು ಇಂದು ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ, ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಾಲೆಗಳು ಇರುವ ಹಿನ್ನೆಲೆಯಲ್ಲಿ ಈ ಸಮೀಕ್ಷೆ ನಡೆಸುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. 

ಶಿಕ್ಷಣ ಇಲಾಖೆಯ ವೇಳಾಪಟ್ಟಿಯಂತೆ ಇಲಾಖೆಯ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳು ಕಾರ್ಯಾರಂಭ ಮಾಡಲಿವೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಕುರಿತು ಎಲ್ಲ ರೀತಿಯ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು. 42 ಸಾವಿರಕ್ಕೂ ಹೆಚ್ಚು ಜನ ಇಲಾಖೆಯ ವಸತಿ ಶಾಲೆಗಳು ಹಾಗೂ ಹಾಸ್ಟೆಲ್ ಗಳಲ್ಲಿ ಕ್ವಾರಂಟೈನ್ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

 ಕ್ರೈಸ್ ವಸತಿ ವಸತಿ ಶಾಲೆಗಳಲ್ಲಿ 660 ಶಿಕ್ಷಕರು ಮತ್ತು 183 ಪದವಿಪೂರ್ವ ಕಾಲೇಜು ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದೆ. 993 ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕಾತಿ ದಾಖಲಾತಿ ಪರಿಶೀಲನೆ ಹಂತದಲ್ಲಿದೆ. 2019-20ನೇ ಸಾಲಿನಲ್ಲಿ ಎಸ್ ಸಿ ಎಸ್ ಪಿ ಮತ್ತು ಎಸ್ ಟಿ ಪಿ ಯೋಜನೆಯಡಿ ಶೇ 94.51 ಗುರಿ ಸಾಧನೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಗಂಗಾ ಕಲ್ಯಾಣ ಯೋಜನೆಯಡಿ ಬಾಕಿ ಇರುವ 8911 ಘಟಕಗಳ ವಿದ್ಯುದೀಕರಣಕ್ಕೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಈ ಯೋಜನೆಯಡಿ 2019-20ರಲ್ಲಿ 8,270 ಕೊಳವೆ ಬಾವಿ ಕೊರೆಯಲಾಗಿದ್ದು, 10,201 ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ. 2019-20ನೇ ಸಾಲಿನಲ್ಲಿ ಎಸ್ ಸಿ ಎಸ್ ಪಿ ಮತ್ತು ಎಸ್ ಟಿ ಪಿ ಯೋಜನೆಯಡಿ ಶೇ 94.51 ಗುರಿ ಸಾಧನೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಐರಾವತ ಯೋಜನೆಯಡಿ ಟ್ಯಾಕ್ಸಿ ವಿತರಣೆ ನಗರ ಪ್ರದೇಶದಲ್ಲಿ ಮಾತ್ರ ಯಶಸ್ವಿಯಾಗುತ್ತಿದೆ. ಇತರ ಪ್ರದೇಶಗಳಲ್ಲಿ ಸರಕು ಸಾಗಣೆ ವಾಹನಗಳನ್ನು ಒದಗಿಸುವಂತೆ ಮುಖ್ಯಮಂತ್ರಿ ಅವರು ಸಲಹೆ ನೀಡಿದರು.

ಲಿಡ್ಕರ್ ಮೂಲಕ 11,772 ಚರ್ಮ ಕುಶಲ ಕರ್ಮಿಗಳಿಗೆ ಕರೋನ ಲಾಕ್ ಡೌನ್ ಸಂದರ್ಭದಲ್ಲಿ ತಲಾ 5 ಸಾವಿರ ರೂ. ನೆರವು ನೀಡಲಾಗಿದೆ.ಸಭೆಯಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT