ಸುಶೀಲಮ್ಮ 
ರಾಜ್ಯ

ಶಿವಮೊಗ್ಗ: ಜಮೀನು ವಿವಾದದಿಂದ ಬೇಸರ, ವಿಷ ಕುಡಿದು ಮಹಿಳೆ ಆತ್ಮಹತ್ಯೆ

ಕೌಟುಂಬಿಕ ಆಸ್ತಿ ಕಲಹದಿಂದ ಬೇಸತ್ತ ಮಹಿಳೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ನಡೆದಿದೆ.

ಶಿವಮೊಗ್ಗ: ಕೌಟುಂಬಿಕ ಆಸ್ತಿ ಕಲಹದಿಂದ ಬೇಸತ್ತ ಮಹಿಳೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ನಡೆದಿದೆ.

ಶಿಕಾರಿಪುರದ ಕಾಗಿನೆಲ್ಲಿ ಗ್ರಾಮದ ಸುಶೀಲಮ್ಮ(43) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. 

ಘಟನೆ ವಿವರ

ಸುಶೀಲಮ್ಮ ಅವರ ಪತಿ ಚಂದ್ರಪ್ಪ ಅವರು ಹತ್ತು ಎಕರೆ ಭೂಮಿಯನ್ನು ಖರೀದಿಸಿದ್ದರು. ಈ ಆಸ್ತಿಯನ್ನು ಆತ ತನ್ನ ತಾಯಿಯ ಹೆಸರಲ್ಲಿ ನೊಂದಾಯಿಸಿದ್ದರು. ಆದರೆ ಆಸ್ತಿ ಮೇಲೆ ಕಣ್ಣಿಟ್ಟಿದ್ದ ಚಂದ್ರಪ್ಪ ಸೋದರರು ಈ ಆಸ್ತಿಯನ್ನು ತಮ್ಮ ಹೆಸರಿನಲ್ಲಿ ನೋಂದಾಯಿಸುವಂತೆ ತಾಯಿಗೆ ಪೀಡಿಸುತ್ತಿದ್ದರು. ಈ ವಿಷಯದಲ್ಲಿ, ಸಹೋದರರು ಆಗಾಗ್ಗೆ ಪರಸ್ಪರ ಜಗಳವಾಡುತ್ತಿದ್ದರು.

ಅಂತಿಮವಾಗಿ ತಾಯಿ ಸೋದರರ ನಡುವೆ ಮಾತುಕತೆಗೆ ಸಿದ್ದತೆ ಂಆಡಿದ್ದಾರೆ. ಅಲ್ಲದೆ ಆಸ್ತಿಯನ್ನು ಮೂವರು ಸಹೋದರರ ನಡುವೆ ಸಮಾನವಾಗಿ ಹಂಚಿಕೆ ಮಾಡಲು ತೀರ್ಮಾನಿಸಿದ್ದಾರೆ. ಆದರೆ ತನ್ನ ಪತಿಗೆ ಸೇರಿದ್ದ ಭೂಮಿಗೆ ಭೇಟಿ ನೀಡಿದ್ದ ಸುಶೀಲಮ್ಮನನ್ನು ಕಂಡ ಆಕೆಯ ಮೈದುನರು ಅವಾಚ್ಯ ಶಬ್ದಗಳನ್ನಾಡಿ ಅಪಮಾನಿಸಿದ್ದಾರೆ. ಇದರಿಂದಾಗಿ ಆಕೆಯ ಮನಸ್ಸಿಗೆ ಘಾಸಿಯಾಗಿದೆ.

ಮನನೊಂದಿದ್ದ ಸುಶೀಲಮ್ಮ ಮನೆಗೆ ತೆರಳಿದವಳೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷ ಕುಡಿದಿದ್ದ ಆಕೆಯನ್ನು ಚಿಕಿತ್ಸೆಗಾಗಿ ನಗರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ತಲುಪುವ ಮೊದಲು ಆಕೆ ಕೊನೆಯುಸಿರೆಳೆದಿದ್ದಾಳೆ. 

ಘಟನೆ ಸಂಬಂಧ ಶಿಕಾರಿಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ಪ್ರವಾಹದ ರೌದ್ರಾವತಾರ: ಮತ್ತೊಂದು ಜಲಪ್ರಳಯದ ಭೀತಿ; ರಕ್ಷಣಾ ಕಾರ್ಯಾಚರಣೆ ಸ್ಥಗಿತಕ್ಕೆ ಆದೇಶ, ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೈನಿಕರಿಗೆ ಸೂಚನೆ..!

2019- 2023 ರವರೆಗೆ MUDA ದಲ್ಲಿ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು: ನಿವೇಶನ ಪಡೆದವರಿಗೆ ಯತೀಂದ್ರ ಸಿದ್ದರಾಮಯ್ಯ ಶಾಕ್!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 472ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!