ನೆಲೋಗಿ ಠಾಣೆ ಪಿಎಸ್ ಐ ಮಲ್ಲಣ್ಣ ಯಲಗೊಂಡ 
ರಾಜ್ಯ

ಕೊರೋನಾ ಸಂಕಟದ ನಡುವೆ ಪಿಎಸ್ಐ ಅದ್ದೂರಿ ಹುಟ್ಟುಹಬ್ಬ, ಅಭಿಮಾನಿಗಳಿಂದ ಹಾಲಿನ ಅಭಿಷೇಕ!

ತಾಂಡವವಾಡುತ್ತಿರುವ ಕೊರೊನಾ ಭೀತಿ ನಡುವೆಯೂ ದೈಹಿಕ ಅಂತರ ಮರೆತು ಪಿಎಸ್​ಐ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿಯಲ್ಲಿ ನಡೆದಿದೆ.

ಕಲಬುರಗಿ:  ತಾಂಡವವಾಡುತ್ತಿರುವ ಕೊರೊನಾ ಭೀತಿ ನಡುವೆಯೂ ದೈಹಿಕ ಅಂತರ ಮರೆತು ಪಿಎಸ್​ಐ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿಯಲ್ಲಿ ನಡೆದಿದೆ.

ಜೂ. 13ರಂದು ನೆಲೋಗಿ ಠಾಣೆ ಪಿಎಸ್ ಐ ಮಲ್ಲಣ್ಣ ಯಲಗೊಂಡ ಅವರ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳೆಲ್ಲ ಸೇರಿ ಅದ್ಧೂರಿಯಾಗಿ ಆಚರಿಸಿರುವ ವಿಡಿಯೋ ಒಂದು ವೈರಲ್ ಆಗಿದೆ.

ಈ ಸಂದರ್ಭದಲ್ಲಿ ಪಿಎಸ್‌ಐ ಮಲ್ಲಣ್ಣ ಅವರಿಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ.

 ಹುಟ್ಟುಹಬ್ಬ ಸಂಭ್ರಮದಲ್ಲಿದ್ದ ಅಭಿಮಾನಿಗಳು ಸಾಮಾಜಿಕ ಅಂತರ ಮರೆತಿದ್ದು, ಮಾಸ್ಕ್‌ ಧರಿಸದೆ ನಿರ್ಲಕ್ಷ್ಯವಹಿಸಿದ್ದಾರೆ.

ಅಲ್ಲದೇ, ಸರ್ಕಾರದ ಆದೇಶ ಗಾಳಿಗೆ ತೂರಿದ್ದರಿಂದ ಕೊರೊನಾ ವಾರಿಯರ್​ರ ಬೇಜವಾಬ್ದಾರಿತನಕ್ಕೆ ವ್ಯಾಪಕವಾಗಿ ಟೀಕೆಗಳು ಕೇಳಿ ಬಂದಿವೆ.

ಘಟನೆಗೆ ಸಂಬಂಧಿಸಿದಂತೆ ಎಸ್ಪಿ ಯಡಾ ಮಾರ್ಟಿನ್ ಪ್ರತಿಕ್ರಿಯಿಸಿ, ಕೊರೊನಾ ಸಂದರ್ಭದಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದು ಸರಿಯಲ್ಲ. ಅಲ್ಲದೇ, ಈ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಹೆಚ್ಚಿನ ಜವಾಬ್ದಾರಿ ಇರುತ್ತದೆ ಎಂದರು.

ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಪಿಎಸ್‌ಐ ಮಲ್ಲಣ್ಣ ಯಲಗೊಂಡ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!