ಸಂಗ್ರಹ ಚಿತ್ರ 
ರಾಜ್ಯ

ಮಂಗಳೂರು: ಬೆಂಕಿ ಹಚ್ಚಿಕೊಂಡು ಅಣ್ಣ ತಂಗಿ ಆತ್ಮಹತ್ಯೆ!

ಸಹೋದರ, ಸಹೋದರಿಯರಿಬ್ಬರು ಪೆಟ್ರೋಲ್ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದಲ್ಲಿ ನಡೆದಿದೆ.

ಮಂಗಳೂರು: ಸಹೋದರ, ಸಹೋದರಿಯರಿಬ್ಬರು ಪೆಟ್ರೋಲ್ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದಲ್ಲಿ ನಡೆದಿದೆ.

ನೀಲಯ್ಯ ಶೆಟ್ಟಿಗಾರ್ (42) ಹಾಗೂ ಕೇಸರಿ (39) ಆತ್ಮಹತ್ಯೆ ಮಾಡಿಕೊಂಡವರು.

ಇಬ್ಬರೂ ಹಲವು ಸಮಯದಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಅವರು ತಮ್ಮ ಮನೆಯ ಕೋಣೆಯೊಳಗೆ ತಮಗೆ ತಾವು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ನೀಲಯ್ಯ ಅವರ ಸಹೋದರಿ ಮತ್ತು ಅವರ ಪತ್ನಿ ಒಂದೇ ಮನೆಯಲ್ಲಿ ವಾಸಿಸುತ್ತಿದ್ದಾರೆ. ಅವರು ಇನ್ನೊಂದು ಕೋಣೆಯಲ್ಲಿ ಮಲಗಿದ್ದರು. ಬೆಂಕಿ ಜ್ವಾಲೆ ಹೆಚ್ಚಾಗಿ ಇಬ್ಬರೂ ಕೂಗಿಕೊಳ್ಳುತ್ತಿದ್ದ ವೇಳೆ ಅವರು ನೆರವಿಗೆ ಧಾವಿಸಿದ್ದಾರೆ. ಸ್ಥಳೀಯರ ಸಹಾಯದಿಂದ ಅವರನ್ನು ಬಂಟ್ವಾಲ್‌ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲೇ ಇಬ್ಬರೂ ಪ್ರಾಣ ಕಳೆದುಕೊಂಡಿದ್ದರು.

ಬಂಟ್ವಾಳ ಗ್ರಾಮೀಣ ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪ್ರಸನ್ನ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಹಿಂದೆ ನೀಲಯ್ಯ  ಕೈಮಗ್ಗ ಕೆಲಸದಲ್ಲಿ ತೊಡಗಿದ್ದರು. ಆದರೆ ಅನಾರೋಗ್ಯದ ಕಾರಣ ಅದನ್ನು ನಿಲ್ಲಿಸಿದ್ದರು ಎಂದು ತಿಳಿದುಬಂದಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BiggBoss Kannada: ಜಾಲಿವುಡ್​ ಸ್ಟುಡಿಯೋಸ್​ಗೆ ಬೀಗ; ಮನೆಯಿಂದ ಹೊರಬಂದ ಬಿಗ್‌ಬಾಸ್‌ ಸ್ಪರ್ಧಿಗಳು ಹೋಗಿದ್ದೇಲ್ಲಿಗೆ?

ಥಿಯೇಟರ್ ಹಾಗೂ ರಸ್ತೆಗಳಲ್ಲಿ ದೈವದ ಅನುಕರಣೆ ಮಾಡಬೇಡಿ: ಪ್ರೇಕ್ಷಕರಲ್ಲಿ ಕಾಂತಾರ: ಅಧ್ಯಾಯ 1 ಚಿತ್ರತಂಡ ಮನವಿ!

ತುಮಕೂರು: ಮಾರ್ಕೋನಹಳ್ಳಿ ಡ್ಯಾಂನಲ್ಲಿ ದುರಂತ; ಒಂದೇ ಕುಟುಂಬದ 6 ಮಂದಿ ನೀರುಪಾಲು!

ಬಿಹಾರ ಚುನಾವಣೆ: ಮಹಾಘಟಬಂಧನ್‌ನಲ್ಲಿ ಬಿರುಕು; RJD ಆಫರ್ ತಿರಸ್ಕರಿಸಿದ CPI-ML

"ಋತುಮತಿಯರನ್ನೂ ಬಿಡದ ಕಾಮುಕ": ದೆಹಲಿ ಬಾಬಾ ಚೈತನ್ಯಾನಂದ ಸರಸ್ವತಿ ಕೃತ್ಯಕ್ಕೆ ಮಹಿಳಾ ಸಹಚರರಿಂದ ಸಾಥ್; "ಕಾರಣ ಹೇಳಬೇಡಿ" ಎಂದು ಬೈಗುಳ!

SCROLL FOR NEXT